25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

ಬೆಳ್ತಂಗಡಿ: ಬೆಳ್ತಂಗಡಿ: ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಮಹಾಸಂಭ್ರಮವು ಮೇ 3 ರಿಂದ ಆರಂಭಗೊಂಡು ಮೇ 12 ರ ವರೆಗೆ ವಿವಿಧ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎಂದಿನಂತೆ ಕಾಜೂರು ಮತ್ತು ಕಿಲ್ಲೂರು ಜಂಟಿ ಜಮಾಅತ್ ಗಳ ಆಶ್ರಯದಲ್ಲಿ ರಚನೆಯಾಗಿರುವ ಉರೂಸ್ ಸಮಿತಿಯ ನೇತೃತ್ವದಲ್ಲಿ ಉರೂಸ್ ಕಾರ್ಯಕ್ರಮಗಳು ನಡೆಯಲಿದೆ ಎಂದು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಅವರು ಎ.15ರಂದು ಬೆಳ್ತಂಗಡಿ ಸುವರ್ಣ ಆಕೇರ್ಡ್ ನಲ್ಲಿ ನಡೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್‍ಯಕ್ರಮದಲ್ಲಿ ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ಮತ್ತು ದ.ಕ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಸಯ್ಯಿದ್ ಕೂರತ್ ತಂಙಳ್ ಅವರ ಮಾರ್ಗದರ್ಶನದಲ್ಲಿ ನಡೆಯುವ ಕಾರ್ಯಕ್ರಮದ ನೇತೃತ್ವವನ್ನು ಸಯ್ಯಿದ್ ಕಾಜೂರು ತಂಙಳ್ ವಹಿಸಲಿದ್ದಾರೆ.

ಮೇ. 3 ರಂದು ಉರೂಸ್ ಸಮಾರಂಭದ ಉದ್ಘಾಟನೆಯನ್ನು ತಾ. ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಸಯ್ಯಿದ್ ಸಾದಾತ್ ತಂಙಳ್ ನೆರವೇರಿಸಲಿದ್ದು, ಧ್ವಜಾರೋಹಣವನ್ನು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಕಾಜೂರು ನಡೆಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಯ್ಯಿದ್ ಕೂರತ್ ತಂಙಳ್ ಅಧ್ಯಕ್ಷತೆ ವಹಿಸಿ ದುಆ ಆಶೀರ್ವಚನ ನೀಡಲಿದ್ದಾರೆ. ಉರೂಸ್ ಪ್ರಯುಕ್ತ 10 ದಿನಗಳಲ್ಲಿ ಪ್ರತಿದಿನ ರಾತ್ರಿ ಕರ್ನಾಟಕ- ಕೇರಳದ ಪ್ರಸಿದ್ದ ವಾಗ್ಮಿಗಳಿಂದ ಧಾರ್ಮಿಕ ಪ್ರವಚನ ನಡೆಯಲಿದೆ. ಈ ಉಪನ್ಯಾಸ ಮಾಲಿಕೆಯನ್ನು ಸಯ್ಯಿದ್ ಕಾಜೂರು ತಂಙಳ್ ಉದ್ಘಾಟಿಸಲಿದ್ದಾರೆ. ಮೇ .9 ರಂದು ಆಧ್ಯಾತ್ಮಿಕ ಕಾರ್ಯಕ್ರಮವಾದ “ಬೃಹತ್ ದ್ಸಿಕ್ರ್ ಮಜ್ಲಿಸ್” ನಡೆಯಲಿದೆ.

ಈ ಸಮಾರಂಭದಲ್ಲಿ ತಾಲೂಕು ಮತ್ತು ಜಿಲ್ಲೆಯ ಅನೇಕ ಸಯ್ಯಿದರುಗಳು, ಉಲಮಾಗಳು, ಸಾಮಾಜಿಕ- ಧಾರ್ಮಿಕ ನಾಯಕರುಗಳು ಭಾಗವಹಿಸಲಿದ್ದಾರೆ.

ಮೇ. 12: ಉರೂಸ್ ಸಮಾರೋಪ; ಸರ್ವಧರ್ಮೀಯರ ಸೌಹಾರ್ದ ಸಂಗಮ:

ಮೇ. 12 ರಂದು ಸಂಜೆ ಸರ್ವಧರ್ಮೀಯರ ಸೌಹಾರ್ದ ಸಮಾರಂಭ ನಡೆಯಲಿದ್ದು, ಸಯ್ಯಿದ್ ಕುಂಬೋಳ್ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಸರಕಾರದ ಸಚಿವರುಗಳು, ಮಾಜಿ ಸಚಿವರುಗಳು, ಶಾಸಕರುಗಳು ಭಾಗವಹಿಸಲಿದ್ದಾರೆ. ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಸಯ್ಯಿದ್ ಜಿಫ್ರಿ ತಂಙಳ್ ಬೆಳ್ತಂಗಡಿ, ಸಯ್ಯಿದ್ ಮುಖ್ತಾರ್ ತಂಙಳ್ ಕುಂಬೋಳ್, ಯೆನಪೋಯ ಅಬ್ದುಲ್ಲಕುಂಞಿ, ಶಾಫಿ ಸಅದಿ ಬೆಂಗಳೂರು, ಡಾ. ಅಬ್ದುರಶೀದ್ ಝೈನಿ, ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಡಾ. ದೇವರ್ಸೂಲ ಅಬ್ದುಸ್ಸಲಾಂ ಮುಸ್ಲಿಯಾರ್, ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮುಹಮ್ಮದ್ ಮಸೂದ್ ಮೊದಲಾದವರು ಭಾಗವಹಿಸಲಿದ್ದಾರೆ.

ಶೈಕ್ಷಣಿಕ ಪ್ರಗತಿ;
ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿಯ ಹೆಜ್ಜೆ ಇಡುತ್ತಾ ಬಂದಿರುವ ಕಾಜೂರಿನಲ್ಲಿ ಈಗಾಗಲೇ ರಹ್ಮಾನಿಯಾ ಪ್ರೌಢ ಶಾಲೆ ನಡೆಯುತ್ತಿದ್ದು ಉತ್ತಮ ಫಲಿತಾಂಶ ದಾಖಲಿಸಿದೆ. ಮಹಿಳಾ ಶರೀಅತ್ ಮತ್ತು ಪಿಯು ಕಾಲೇಜು ಕಾರ್ಯಾರಂಭಿಸಿದೆ. ಜೊತೆಗೆ ಈ ಬಾರಿ ‘ರಾಹ ಇಂಗ್ಲೀಷ್ ಮೀಡಿಯಂ ಪಬ್ಲಿಕ್ ಸ್ಕೂಲ್’ ಎಂಬ ಹೆಸರಿನಲ್ಲಿ ಅಂಗ್ಲ ಮಾಧ್ಯಮದ 1 ರಿಂದ 8 ನೇ ತರಗತಿ ವರೆಗೆ ಶಾಲೆಗೆ ಶಿಕ್ಷಣ ಇಲಾಖೆಯಿಂದ ಅನುಮತಿ ದೊರೆತಿದೆ. ಸರಕಾರದ 1.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೂರಂತಸ್ತಿನ ‘ಮುಸಾಫಿರ್ ಖಾನಾ ಕಟ್ಟಡ’ದ ಕಾಮಗಾರಿ ಅಂತಿಮ ಹಂತ ತಲುಪಿದ್ದು ಉದ್ಘಾಟನೆಗೆ ಸನ್ನದ್ಧವಾಗಿದೆ. ಅಂತೂ ಕಾಜೂರಿನಲ್ಲಿ ಮತ್ತೊಮ್ಮೆ ಉರೂಸ್ ಸಂಭ್ರಮದ ಗತಕಾಲದ ವೈಭವದ ದಿನಗಳು ಮತ್ತೆ ಮರುಕಳಿಸಲಿದೆ.

ಉರೂಸ್ ಯಶಸ್ವಿಗಾಗಿ ಕಾಜೂರು ಮತ್ತು ಕಿಲ್ಲೂರು ಜಂಟಿ ಜಮಾಅತ್ ಗಳ ಉರೂಸ್ ಸಮಿತಿ ಆಹೋರಾತ್ರಿ ಶ್ರಮಿಸುತ್ತಿದೆ.

ಮೇ.12 ರಂದು ರಾತ್ರಿ ಉರೂಸ್ ಸಮಾರೋಪದಲ್ಲಿ ಸುಲ್ತಾನುಲ್ ಉಲಮಾ ಇಂಡಿಯನ್‌ ಗ್ರಾಂಡ್ ಮುಫ್ತಿ ಶೈಖ್ ಅಬೂಬಕ್ಕರ್ ಅಹ್ಮದ್ ಅವರ ಸುಪುತ್ರ, ಅಂತಾರಾಷ್ಟ್ರೀಯ ಶಿಕ್ಷಣ ಸಮುಚ್ಚಯ ಮರ್ಕಝ್ ನಾಲೆಡ್ಜ್ ಸಿಟಿ ಇದರ ನಿರ್ದೇಶಕ ಡಾ. ಎ.ಪಿ ಅಬ್ದುಲ್ ಹಕೀಂ ಅಝ್ಹರಿ ಮುಖ್ಯಪ್ರಭಾಷಣ ನೆರವೇರಿಸಲಿದ್ದು, ಈ ಸಮಾರಂಭದಲ್ಲಿ ಸಯ್ಯಿದ್ ಕುಂಬೋಳ್ ತಂಙಳ್, ಕಾವಳಕಟ್ಟೆ ಡಾ. ಹಝ್ರತ್, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಲಕ್ಕಿಸ್ಟಾರ್ ಅಬ್ದುಲ್ ನಾಸಿರ್ ಸಹಿತ ಇನ್ನಿತರ ಅನೇಕ ಉಲಮಾ-ಉಮರಾ ಗಣ್ಯರುಗಳು ಭಾಗವಹಿಸಲಿದ್ದಾರೆ. ದರ್ಗಾದ ಧಾರ್ಮಿಕ ಸಂಪ್ರದಾಯದಂತೆ ಬೆಲ್ಲದಗಂಜಿ ವಿತರಣೆ, ಉರೂಸ್ ಕೊನೆಯ ದಿನ ಸಾರ್ವಜನಿಕ ಮಹಾ ಅನ್ನದಾನ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಉರೂಸ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು, ಉರೂಸ್ ಸಮಿತಿ ಪ್ರ. ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಉರೂಸ್ ಸಮಿತಿ ಜೊತೆ ಕಾರ್ಯದರ್ಶಿ ಶಾಹುಲ್ ಹಮೀದ್ ಕಿಲ್ಲೂರು, ಉರೂಸ್ ಸಮಿತಿ ಕೋಶಾಧಿಕಾರಿ ಮುಹಮ್ಮದ್ ಕಮಾಲ್ ಉಪಸ್ಥಿತರಿದ್ದರು.

Related posts

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya
error: Content is protected !!