July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ (81ವ)ರವರು ಹೃದಯಘಾತದಿಂದ ನಿಧನರಾಗಿದ್ದಾರೆ.

ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. 1964ರಲ್ಲಿ ‘ವೀರ ಸಂಕಲ್ಪ’ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ ಮಿಂಚಿದ್ದರು.

ದ್ವಾರಕೀಶ್ ಅವರು ಹೆಚ್ಚು ಜನಪ್ರಿಯರಾದದ್ದು ವಿಷ್ಣುವರ್ಧನ್ ಅವರೊಂದಿಗೆ ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ದವಾಗಿತ್ತು. ವಿಷ್ಣುವರ್ಧನ್ ಅವರ ಅನೇಕ ಸಿನಿಮಾದಲ್ಲಿ ಅವರು ತೆರೆ ಹಂಚಿಕೊಂಡಿದ್ದರು. 1966ರಲ್ಲಿ ದ್ವಾರಕೀಶ್‌ ಅವರು ‘ಮಮತೆಯ ಬಂಧನ’ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದರು. ಡಾ.ರಾಜ್‌ಕುಮಾ‌ರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಕಾಲಿಟ್ಟರು. ದ್ವಾರಕೀಶ್‌ ಚಿತ್ರ ಬ್ಯಾನರ್ ಅಡಿಯಲ್ಲಿ ಸುಮಾರು 40 ಕ್ಕೂ ಹೆಚ್ಚಿನ ಸಿನಿಮಾಗಳನ್ನು ನಿರ್ಮಿಸಿದ್ದರು.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya
error: Content is protected !!