May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ (81ವ)ರವರು ಹೃದಯಘಾತದಿಂದ ನಿಧನರಾಗಿದ್ದಾರೆ.

ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. 1964ರಲ್ಲಿ ‘ವೀರ ಸಂಕಲ್ಪ’ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ ಮಿಂಚಿದ್ದರು.

ದ್ವಾರಕೀಶ್ ಅವರು ಹೆಚ್ಚು ಜನಪ್ರಿಯರಾದದ್ದು ವಿಷ್ಣುವರ್ಧನ್ ಅವರೊಂದಿಗೆ ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ದವಾಗಿತ್ತು. ವಿಷ್ಣುವರ್ಧನ್ ಅವರ ಅನೇಕ ಸಿನಿಮಾದಲ್ಲಿ ಅವರು ತೆರೆ ಹಂಚಿಕೊಂಡಿದ್ದರು. 1966ರಲ್ಲಿ ದ್ವಾರಕೀಶ್‌ ಅವರು ‘ಮಮತೆಯ ಬಂಧನ’ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದರು. ಡಾ.ರಾಜ್‌ಕುಮಾ‌ರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಕಾಲಿಟ್ಟರು. ದ್ವಾರಕೀಶ್‌ ಚಿತ್ರ ಬ್ಯಾನರ್ ಅಡಿಯಲ್ಲಿ ಸುಮಾರು 40 ಕ್ಕೂ ಹೆಚ್ಚಿನ ಸಿನಿಮಾಗಳನ್ನು ನಿರ್ಮಿಸಿದ್ದರು.

Related posts

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya
error: Content is protected !!