27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ವಿವಿಧ ವೈದಿಕ,ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿದೆ.

ಶ್ರೀ ಕ್ಷೇತ್ರದಲ್ಲಿ ದೇವರ ದರ್ಶನ ಬಲಿ ಉತ್ಸವ,ಕಲಶಾಭಿಷೇಕ, ವಸಂತ ಕಟ್ಟೆ ಪೂಜೆ,ಅಶ್ವಥ ಕಟ್ಟೆ ಸಮರ್ಪಣೆ, ಹರಿನಾಮ‌ ಸಂಕೀರ್ತನೆ, ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ, ದೈವ ಮತ್ತು ದೇವರ ಭೇಟಿ,ರಥ ಪೂಜೆ, ಮಹಾಪೂಜೆ ನಡೆಯಿತು.

ಸಾವಿರಾರು ಸಂಖ್ಯೆಯಲ್ಲಿ ಊರ ಪರವೂರ ಭಕ್ತಾದಿಗಳು ದೇವರ ದರ್ಶನ ಪಡೆದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಬಿ‌ ಶೀತಲ್ ಪಡಿವಾಲ್ ರವರ ನೇತೃತ್ವದಲ್ಲಿ ಎಲ್ಲಾ ಕಾರ್ಯಕ್ರಮಗಳು ನಡೆಯಿತು.

ಮನೋರಂಜನಾ ಕಾರ್ಯಕ್ರಮಗಳು: ಜಾತ್ರ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಶ್ರೀ ಪಂಚಲಿಂಗೇಶ್ವರ ಹವ್ಯಾಸಿ ಯಕ್ಷಗಾನ ತರಭೇತಿ ಕೇಂದ್ರದ ಮಕ್ಕಳಿಂದ ಗಿರಿಜಾ ಕಲ್ಯಾಣ ಯಕ್ಷಗಾನ, ಅರೆಹೊಳೆ ಪ್ರತಿಷ್ಠಾನ ಮಂಗಳೂರು ಕುಂದಾಪುರ ತಂಡದವರಿಂದ ಸಾಂಸ್ಕೃತಿಕ ವೈಭವ, ಕೊಡಿಯಲ್ ಬೈಲ್ ರಚಿಸಿ, ನಿರ್ದೇಶನದ ಮೈತಿದಿ ತುಳು ನಾಟಕ ಪ್ರದರ್ಶನಗೊಂಡಿತು.

Related posts

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!