ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ (81ವ)ರವರು ಹೃದಯಘಾತದಿಂದ ನಿಧನರಾಗಿದ್ದಾರೆ.
ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. 1964ರಲ್ಲಿ ‘ವೀರ ಸಂಕಲ್ಪ’ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ ಮಿಂಚಿದ್ದರು.
ದ್ವಾರಕೀಶ್ ಅವರು ಹೆಚ್ಚು ಜನಪ್ರಿಯರಾದದ್ದು ವಿಷ್ಣುವರ್ಧನ್ ಅವರೊಂದಿಗೆ ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ದವಾಗಿತ್ತು. ವಿಷ್ಣುವರ್ಧನ್ ಅವರ ಅನೇಕ ಸಿನಿಮಾದಲ್ಲಿ ಅವರು ತೆರೆ ಹಂಚಿಕೊಂಡಿದ್ದರು. 1966ರಲ್ಲಿ ದ್ವಾರಕೀಶ್ ಅವರು ‘ಮಮತೆಯ ಬಂಧನ’ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದರು. ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಕಾಲಿಟ್ಟರು. ದ್ವಾರಕೀಶ್ ಚಿತ್ರ ಬ್ಯಾನರ್ ಅಡಿಯಲ್ಲಿ ಸುಮಾರು 40 ಕ್ಕೂ ಹೆಚ್ಚಿನ ಸಿನಿಮಾಗಳನ್ನು ನಿರ್ಮಿಸಿದ್ದರು.