24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

ಧಮ೯ಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ, ಧರ್ಮಸ್ಥಳ ಇದರ ವತಿಯಿಂದ
ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿ, ಸರ್ವಜನರ ಮನವನ್ನು ಗೆದ್ದಿರುವ ಚಂದು ನಾಯ್ಕ ಇವರಿಗೆ ಸನ್ಮಾನ ಕಾರ್ಯಕ್ರಮ ಎ.17ರಂದು ಶಾಂತಿವನದಲ್ಲಿ ಜರುಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಡಿ. ಹರ್ಷೇಂದ್ರ ಕುಮಾರ್‌ ಅವರು ವಹಿಸಿ, ಚಂದು ನಾಯ್ಕ ಅವರನ್ನು ಅಭಿಮಾನ ಪೂರ್ವಕ ಸನ್ಮಾನಿಸಿ ಮಾತನಾಡಿದರು.

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ವಿದ್ವಾನ್ ಡಾ. ಶ್ರೀಧರ ಭಟ್ ಅಭಿನಂದನಾ ಭಾಷಣ ಮಾಡಿದರು.
ಧರ್ಮಸ್ಥಳ ಶಾಂತಿವನ ಟ್ರಸ್ಟ್‌ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ, ಶುಭಾಶಂಸನೆ ಮಾಡಿದರು. ಆಡಳಿತಾಧಿಕಾರಿ ಜಗನ್ನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ವೈದ್ಯಾಧಿಕಾರಿ , ಡಾ. ಬಿ. ಶಿವಪ್ರಸಾದ ಶೆಟ್ಟಿ, ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ಉಪಪ್ರಾಂಶುಪಾಲೆ ಡಾ.ಸುಜಾತ ಸನ್ಮಾನ ಪತ್ರ ವಾಚಿಸಿದರು. ಕು.ಭಾಷಿಣಿ ಮತ್ತು ಬಳಗದವರು ಪ್ರಾಥ೯ನೆ ಹಾಡಿದರು.
ಅನನ್ಯ ಬೆಳ್ತಂಗಡಿ ಕಾಯ೯ಕ್ರಮ ನಿರೂಪಿಸಿದರು. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ನಿದೇಶ೯ಕ ಡಾ.ಐ.ಶಶಿಕಾಂತ್ ಜೈನ್ ವಂದಿಸಿದರು. ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

Suddi Udaya

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!