April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

ಬೆಳ್ತಂಗಡಿ : ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿಕಟಪೂರ್ವ ಪ್ರಾಂಶುಪಾಲರಾದ ಡಾ. ಶರತ್ ಕುಮಾರ್ ಹೆಚ್ ಕೆ ಇವರು ವಹಿಸಿ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ತಮ್ಮ ಪ್ರತಿಭೆಗಳನ್ನು ಹೊರ ಸೂಸಲು ಅನುಕೂಲ ಮಾಡಿಕೊಡುತ್ತದೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್. ನೆರವೇರಿಸಿ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಪ್ರಜ್ಞೆ ಹಾಗೂ ಕೌಶಲ್ಯಗಳನ್ನು ಬೆಳೆಸಲು ಸಾಧ್ಯ ಕೇವಲ ತರಗತಿ ಬೋಧನೆ ಅಷ್ಟೇ ವಿದ್ಯಾರ್ಥಿಗಳ ಬೆಳವಣಿಗೆಗೆ ಸಾಕಾಗುವುದಿಲ್ಲ ಎಂದು ತಿಳಿಸಿದರು.

ಮಾನವಿಕ ಸಂಘದ ಸಂಯೋಜಕರಾದ ಪ್ರೊ| ರೋನಾಲ್ಡ್ ಪ್ರವೀಣ್ ಕೊರೆಯ ಪ್ರಸ್ತಾವನೆಯನ್ನು ಮಾಡಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ| ಪದ್ಮನಾಭ ಕೆ, ಸಾಂಸ್ಕೃತಿಕ ಸಂಘದ ಸಂಯೋಜಕರಾದ ಪ್ರೊಫೆಸರ್ ಸುರೇಶ್ ವಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ| ಕವಿತಾ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಕುಮಾರಿ ಆಶಾಲತಾ ಉಪಸ್ಥಿತರಿದ್ದರು. ಮಾನವಿಕ ಸಂಘದ ಅಧ್ಯಕ್ಷ ಸ್ವಸ್ತಿಕ್ ಸ್ವಾಗತಿಸಿದರು. ಕುಮಾರಿ ಪುಷ್ಪ ವಂದಿಸಿದರು. ಕುಮಾರಿ ಶ್ರದ್ಧಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya
error: Content is protected !!