25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

ಧಮ೯ಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ, ಧರ್ಮಸ್ಥಳ ಇದರ ವತಿಯಿಂದ
ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿ, ಸರ್ವಜನರ ಮನವನ್ನು ಗೆದ್ದಿರುವ ಚಂದು ನಾಯ್ಕ ಇವರಿಗೆ ಸನ್ಮಾನ ಕಾರ್ಯಕ್ರಮ ಎ.17ರಂದು ಶಾಂತಿವನದಲ್ಲಿ ಜರುಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಡಿ. ಹರ್ಷೇಂದ್ರ ಕುಮಾರ್‌ ಅವರು ವಹಿಸಿ, ಚಂದು ನಾಯ್ಕ ಅವರನ್ನು ಅಭಿಮಾನ ಪೂರ್ವಕ ಸನ್ಮಾನಿಸಿ ಮಾತನಾಡಿದರು.

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ವಿದ್ವಾನ್ ಡಾ. ಶ್ರೀಧರ ಭಟ್ ಅಭಿನಂದನಾ ಭಾಷಣ ಮಾಡಿದರು.
ಧರ್ಮಸ್ಥಳ ಶಾಂತಿವನ ಟ್ರಸ್ಟ್‌ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ, ಶುಭಾಶಂಸನೆ ಮಾಡಿದರು. ಆಡಳಿತಾಧಿಕಾರಿ ಜಗನ್ನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ವೈದ್ಯಾಧಿಕಾರಿ , ಡಾ. ಬಿ. ಶಿವಪ್ರಸಾದ ಶೆಟ್ಟಿ, ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ಉಪಪ್ರಾಂಶುಪಾಲೆ ಡಾ.ಸುಜಾತ ಸನ್ಮಾನ ಪತ್ರ ವಾಚಿಸಿದರು. ಕು.ಭಾಷಿಣಿ ಮತ್ತು ಬಳಗದವರು ಪ್ರಾಥ೯ನೆ ಹಾಡಿದರು.
ಅನನ್ಯ ಬೆಳ್ತಂಗಡಿ ಕಾಯ೯ಕ್ರಮ ನಿರೂಪಿಸಿದರು. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ನಿದೇಶ೯ಕ ಡಾ.ಐ.ಶಶಿಕಾಂತ್ ಜೈನ್ ವಂದಿಸಿದರು. ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ಮಹಾ ಪರ್ವದಲ್ಲಿ ಬಂಪರ್ ಬಹುಮಾನಗಳ ಅದೃಷ್ಟ ಲಕ್ಕಿ ಡ್ರಾ ವಿಜೇತರು

Suddi Udaya

ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು: “ಸುದ್ದಿ ಉದಯ ಜನಧ್ವನಿ Effect”

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!