37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

ಬೆಳ್ತಂಗಡಿ : ತನ್ನ ಮನೆಯ ಸಾಕು ನಾಯಿ ಜೊತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಎ.18 ರಂದು ಮಧ್ಯಾಹ್ನ ನಡೆದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ ದಿ. ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ (49) ಎಂಬವರು ತನ್ನ ಮನೆಯ ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದಾರೆ.

ಪೂರ್ಣಿಮಾ ತನ್ನ ಮನೆಯಲ್ಲಿ ಸಾಕಿದ್ದ ಸಾಕು ನಾಯಿ ಜೊತೆ ಎಂದಿನಂತೆ ಎ.18 ರಂದು ಮುದ್ದಾಡುತ್ತಿದ್ದರು. ಈ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಬಿದ್ದಿದ್ದು ಈ ಸಮಯ ಸಾಕು ನಾಯಿ ಮಹಿಳೆಯ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದ್ದು. ಕೈಗೆ ಕಚ್ಚಿ ಗಂಭೀರ ಗಾಯಮಾಡಿದೆ ಎಂದು ಹೇಳಲಾಗುತ್ತಿದೆ.ಮನೆಯವರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುತ್ತಿದ್ದಾರೆ‌.

Related posts

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya
error: Content is protected !!