ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಬೆಳ್ತಂಗಡಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರು ಅಭ್ಯರ್ಥಿಗಳಿಗೆ ಚುನಾವಣಾ ಬಹಿಷ್ಕಾರದ ಬಿಸಿ ಮುಟ್ಟಿಸಲು ಆರಂಭಿಸಿದ್ದಾರೆ. ಇಂತಹ ಒಂದು ಘಟನೆ ನಾವೂರು ಗ್ರಾಮದಲ್ಲಿ ನಡೆದಿದೆ.
ಕೈಕಂಬದಿಂದ ಹತ್ಯಡ್ಕ , ಬಳ್ಳಿತೋಟ , ಬೋಜಾರ ಸೇರಿದಂತೆ ನಡ ಗ್ರಾಮದ ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯು ಸಂಪೂರ್ಣ ಅವ್ಯವಸ್ಥಿತವಾಗಿದ್ದು ಜನ ಮತ್ತು ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ತಾಲೂಕಿನಲ್ಲಿ 2019 ರಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಕೈಕಂಬದಲ್ಲಿ ಸೇತುವೆಯು ಬಿರುಕು ಬಿಟ್ಟಿದ್ದು, ಈವರೆಗೂ ಯಾವುದೇ ಜನಪ್ರತಿನಿಧಿಗಳು ಈ ಸಮಸ್ಯೆಗೆ ಸ್ಪಂದಿಸಿಲ್ಲ. ಹೀಗಾಗಿ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಸಾರ್ವಜನಿಕರು ಬ್ಯಾನರ್ ಅಳವಡಿಸಿದ್ದರು. ಈ ಹಿನ್ನಲೆ ಸ್ಥಳಕ್ಕೆ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ವೈಜಣ್ಣ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿ ಮತದಾನದಲ್ಲಿ ಭಾಗವಹಿಸಲು ಮನವೊಲಿಸಿದ್ದಾರೆ.


ಸಾರ್ವಜನಿಕರ ಸಮಸ್ಯೆ ಬಗ್ಗೆ ಮಾತನಾಡಿದ ಅಧಿಕಾರಿಗಳು, ಈ ರಸ್ತೆ ಹಾಗೂ ಸೇತುವೆಯನ್ನು ಮುಖ್ಯ ಆದ್ಯತೆಯ ಮೇರೆಗೆ ಪುನರ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು, ಮೇಲಾಧಿಕಾರಿಗಳು ಸೇರಿದಂತೆ ಸರ್ಕಾರಕ್ಕೆ ಪೋಟೋ ಸಮೇತ ವರದಿ ಮಾಡಲಾಗುವುದು, ಚುನಾವಣೆ ಮುಗಿದ ಬಳಿಕ ರಸ್ತೆಯ ಅಭಿವೃದ್ಧಿ ಮಾಡಲಾಗುವುದು ಎಂದು ಅವರು ಸಾರ್ವಜನಿಕರಿಗೆ ಭರವಸೆ ನೀಡಿದರು.


ಅಧಿಕಾರಿಗಳ ಮಾತಿಗೆ ಬೆಲೆ ನೀಡಿದ ಸಾರ್ವಜನಿಕರು ಚುನಾವಣಾ ಬಹಿಷ್ಕಾರದ ಬ್ಯಾನರ್ ಅನ್ನು ತೆರವುಗೊಳಿಸಿ, ಚುನಾವಣೆ ಬಳಿಕ ಕಾಮಗಾರಿ ಕೈಗೊಳ್ಳದಿದ್ದರೆ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತು ಕಛೇರಿ ಅಧಿಕ್ಷಕ ಪ್ರಶಾಂತ್ ಬಳೆಂಜ , ನಾವೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ , ಸಾರ್ವಜನಿಕರಾದ ಬಂಗಾಡಿ ಸಿಎ ಬ್ಯಾಂಕ್ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಮೇಶ್ ಹತ್ಯಡ್ಕ , ಸುರೇಂದ್ರ ಪೂಜಾರಿ , ಜನಾರ್ದನ ನೈಕ ಸೇರಿದಂತೆ ಹಲವಾರು ಜೊತೆಗಿದ್ದರು.

Related posts

ಜೂ.7: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘದಿಂದ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya
error: Content is protected !!