32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ನಾರಾವಿ ವಲಯ ದ ಕೊಕ್ರಾಡಿ ಸಾವ್ಯಾ ಕಾರ್ಯಕ್ಷೇತ್ರದ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ರೂಪಾಯಿ ಎರಡು ಲಕ್ಷ ದೇಣಿಗೆಯನ್ನು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಸುರೇಂದ್ರ ಕಂಬಳಿ ಬಲ್ಲೋಲಿಗುತ್ತು, ಜೀರ್ಣೋದ್ದಾರ ಸಮಿತಿಯ ಕಾರ್ಯಾಧ್ಯಕ್ಷ ಪಾರ್ಶ್ವನಾಥ ಬಂಗ ಸಾಲ್ಯಾರ ಗುತ್ತು , ಪ್ರಧಾನ ಕಾರ್ಯದರ್ಶಿ ಸುಂದರ ಪೂಜಾರಿ ಕೊಳ್ಳೋಟ್ಟು ಗುತ್ತು, ಕೋಶಾಧಿಕಾರಿ ಪ್ರಕಾಶ್ ಕುಮಾರ್ ಜೈನ್ ಹೊಸಮನೆ ಗುತ್ತು, ಜೊತೆ ಕಾರ್ಯದರ್ಶಿಗಳಾದ ರವಿ ಪೂಜಾರಿ, ಸದಸ್ಯರಾದ ಜಿನೇಶ್ಚಂದ್ರ ಬಲ್ಲಾಳ್ ಮೂಡುಬೈಲು ಗುತ್ತು, ರಾಜು ಶೆಟ್ಟಿ, ಮಂಜಪ್ಪ ಪೂಜಾರಿ, ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಮಾಜಿ ಅಧ್ಯಕ್ಷ ಕಿಟ್ಟಣ್ಣ ಆಚಾರ್ಯ, ಕೊಕ್ರಾಡಿ, ಸಾವ್ಯ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ನಿಧಿ ಶಶಿಧರ್ ಕುಲಾಲ್ ಉಪಸ್ಥಿತರಿದ್ದರು.

Related posts

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

Suddi Udaya
error: Content is protected !!