24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್, (ಸ್ವಾಯತ್ತ) ಉಜಿರೆ ಇಲ್ಲಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಮಡಂತ್ಯಾರ್ ಇದರ ಸಹಯೋಗದಲ್ಲಿ ವಿದ್ಯಾರ್ಥಿ ಸಮಾಗಮ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಣ ಫೌಂಡೇಷನ್ ಇದರ ತಾಲೂಕು ಸಂಯೋಜಕರಾದ ಶ್ರೀ. ಅಮೃತ್ ಭಾಗವಹಿಸಿದ್ದರು.

ವಿದ್ಯಾರ್ಥಿಗಳು ತಮ್ಮ ಬೇಸಿಗೆ ರಜೆಯನ್ನು ಯಾವ ರೀತಿಯಾಗಿ ಪರಿಪೂರ್ಣಗೊಳಿಸಬೇಕು ಎಂದು ತಿಳಿಸುತ್ತಾ ರಜೆಯಲ್ಲಿ ಕೇವಲ ಮೊಬೈಲ್ ಬಳಕೆಗೆ ದಾಸರಾಗದೆ, ಸ್ನೇಹಿತರೊಂದಿಗೆ ಸಮಯ ಕಳೆಯಿರಿ ಮತ್ತು ಗ್ರಾಮೀಣ ಆಟೋಟಗಳನ್ನು ಆಡಿ ಆನಂದಿಸಿ ಎಂದು ಸಲಹೆ ನೀಡಿ, ವಿಶಿಷ್ಟ ಚಟುವಟಿಕೆಗಳನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಶಿಸ್ತಿನಿಂದ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಡಂತ್ಯಾರ್ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಸರೋಜಿನಿ ಉಪಸ್ಥಿತರಿದ್ದರು. ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಾದ ಶಾಹಿದ್ ಅಫ್ರೀದ್, ರಮಿತ, ವೀಕ್ಷಿತ ಕೋಟ್ಯಾನ್, ವಿಯನ್ನ ವೆನಿಸ ಪಾಯಸ್ ನಡೆಸಿಕೊಟ್ಟರು.

Related posts

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!