25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

ಬೆಳ್ತಂಗಡಿ: ಇಂದು‌ ಉಜಿರೆಯಲ್ಲಿ ನಡೆಯಲಿರುವ ಬಿಜೆಪಿ ರೋಡ್ ಶೋ ದಲ್ಲಿ ಭಾಗವಹಿಸಲು ಮಹಿಳೆಯರಿಗೆ ಸೀರೆ ವಿತರಣೆ ಮಾಡಿ ಆಮಿಷ ಒಡ್ಡಲಾಗಿದ್ದು, ಇದರ‌ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕಿ ಲೋಕೇಶ್ವರಿ ವಿನಯಚಂದ್ರ ಹೇಳಿದರು.


ಅವರು ಎ. 20ರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಚುನಾವಣೆ ಸಂದರ್ಭದಲ್ಲಿ ಹಣ, ಹೆಂಡ ಹಂಚಿ ಮತದಾರರನ್ನು ತಮ್ಮತ್ತ ಸೆಳೆಯುತ್ತಿದೆ ಎಂದು ಆರೋಪಿಸಿದರು.
ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಯಿಂದಾಗಿ, ತಾಲೂಕಿನಲ್ಲಿ ಮಹಿಳೆಯರು ಕಾಂಗ್ರೆಸ್ ನತ್ತ ಒಲವು ತೋರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಆಡಳಿತದಲ್ಲಿ ವಿಪರೀತ ಬೆಲೆ ಏರಿಕೆ ಆಗಿದ್ದು, ಜನರು ಜೀವನ ದುಸ್ತರವಾಗಿದೆ ಎಂದು ಆಪಾದಿಸಿದರು.


ಜಿ.ಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ ಮಾತನಾಡಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಹಾಗೂ ಮಹಿಳೆಯರಿಗೆ ರೂ. 1 ಲಕ್ಷ ಯೋಜನೆಯಿಂದಾಗಿ ಮಹಿಳೆಯರು ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿರುವುದರಿಂದ ಭಯಗೊಂಡ ಬಿಜೆಪಿ ರೋಡ್ ಶೋ ನೆಪದಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಮಾಡುವ ಹಂತಕ್ಕೆ ಬಂದಿದೆ. ಇದನ್ನು ನಾವು ಖಂಡಿಸುತ್ತೇವೆ.ದ.ಕ ಲೋಕಸಭಾ‌ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನ್ಯಾಯವಾದಿ ಸಂತೋಷ್ ಕುಮಾರ್ ಮಾತನಾಡಿ, ಬಿಜೆಪಿ ಪಕ್ಷದ ವತಿಯಿಂದ ಸೀರೆ ವಿತರಣೆ ಮಾಡಿದ ಬಗ್ಗೆ ಇಂದು ಬೆಳಗ್ಗೆ ಬೆಳ್ತಂಗಡಿಯಲ್ಲಿ ಸಹಾಯಕ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದೇವೆ. ಬಿಜೆಪಿ ವಿತರಣೆ ಮಾಡಿದ ಸೀರೆಯನ್ನು ರೋಡ್ ಶೋ ಗೆ ಧರಿಸಿಕೊಂಡು ಬಂದ ಮಹಿಳೆಯರನ್ನು ಬಂಧಿಸಲು ದೂರಿನಲ್ಲಿ ಒತ್ತಾಯಿಸಲಾಗಿದೆ. ಒಂದೇ ಕಲರ್ ನ ಸೀರೆಯನ್ನು ಹೆಚ್ಚು ಮಹಿಳೆಯರು ಧರಿಸಿ ಬಂದರೆ ಅಕ್ರಮ ನಡೆದಿದೆ ಎಂದು ಗೊತ್ತಾಗುತ್ತದೆ. ಸೀರೆ ಖರೀದಿ ಬಗ್ಗೆ ಅವರು ದಾಖಲೆ ನೀಡಬೇಕಾಗುತ್ತದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಲ್ಪಸಂಖ್ಯಾತ ಚುನಾವಣಾ ಉಸ್ತುವಾರಿ ಹನೀಫ್ ಕಾಶಿಬೆಟ್ಟು ಉಪಸ್ಥಿತರಿದ್ದರು.

Related posts

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
error: Content is protected !!