39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಕೊರಂಜ ಸರಕಾರಿ ಶಾಲಾ ಮುಂಭಾಗದಲ್ಲಿ ಚರಂಡಿ ಮುಚ್ಚಿದ ಪರಿಣಾಮವಾಗಿ ಮನೆಯೊಳಗೆ ನೀರು ತುಂಬಿದ ಘಟನೆ ಎ.20 ರಂದು ನಡೆಯಿತು.


ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಜ ಸ.ಹಿ.ಪ್ರಾ.ಶಾಲೆ ಮುಂಭಾಗದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆಯ ಚರಂಡಿ ಮುಚ್ಚಿದ ಪರಿಣಾಮವಾಗಿ ರಸ್ತೆ ಬದಿ ಚರಂಡಿ ನೀರು ಹಾಗೂ ಪ್ಲಾಸ್ಟಿಕ್, ಕಸ,ಕಡ್ಡಿ ಮನೆಯೊಳಗೆ ನುಗ್ಗಿ ಮನೆಯವರಿಗೆ ತೊಂದರೆ ಆಗಿದೆ.


ವಿಷಯ ತಿಳಿದು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಸ್ಥಳಕ್ಕೆ ಭೇಟಿ ತಕ್ಷಣ ಸಮಸ್ಯೆಯನ್ನು ಸರಿಪಡಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.


ಕಳೆದ ಸುಮಾರು 5 – 6 ವರ್ಷಗಳಿಂದ ಈ ರೀತಿಯ ತೊಂದರೆಗಳನ್ನು ಸ್ಥಳೀಯರು ಅನುಭವಿಸುತ್ತಿದ್ದಾರೆ. ಗುರುವಾಯನಕರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ಚರಂಡಿ ನಿರ್ಮಾಣದ ಅವ್ಯವಸ್ಥೆಯಿಂದ ಮತ್ತು ಸಂಬಂಧಿಸಿದ ಇಲಾಖೆಯ ನಿರ್ಲಕ್ಷ್ಯ ಕಾರಣವೆಂದು ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಶಾಲಾ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಸಾರ್ವಜನಿಕ ನಡೆದಾಡಲು ತುಂಬಾ ತೊಂದರೆ ಆಗುತ್ತದೆ. ರಸ್ತೆಬದಿಯ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆಯನ್ನು ಮಾಡದೇ ಇದ್ದಲ್ಲಿ ರಸ್ತೆ ತಡೆ ಮಾಡುವ ನಿರ್ಧಾರಕ್ಕೆ ಮುಂದಾಗಿದ್ದಾರೆ.

Related posts

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!