30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವೆಡೆ ಉತ್ತಮ ಮಳೆ

ಬೆಳ್ತಂಗಡಿ: ಶುಕ್ರವಾರ ಸಂಜೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ನೆರಿಯ ಮುಂಡಾಜೆ, ತೋಟತ್ತಾಡಿ, ಚಿಬಿದ್ರೆ, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿದಿದೆ.
ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ.


ರಾಷ್ಟ್ರೀಯ ಹೆದ್ದಾರಿ ಬ್ಲಾಕ್ :
ಮುಂಡಾಜೆ ಗ್ರಾಮದ ನಿಡಿಗಲ್ -ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಕೆಸರುಮಯ ವಾತಾವರಣ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಅಂಬಡ್ತ್ಯಾರು ಎಂಬಲ್ಲಿ ಮಣ್ಣಿನ ರಸ್ತೆಯಲ್ಲಿ ಜಾರಿದ ಟ್ಯಾಂಕರ್ ನಿಂದಾಗಿ ಹಲವು ಸಮಯ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು. ಬೇಕಾಬಿಟ್ಟಿ ದ್ವಿಚಕ್ರವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಇನ್ನಷ್ಟು ಹೆಚ್ಚಲು
ಕಾರಣವಾಯಿತು.ಬಹಲವು ದ್ವಿಚಕ್ರ ವಾಹನ ಸವಾರರು ಉರುಳಿ ಬಿದ್ದ ಘಟನೆಯು ನಡೆಯಿತು.

Related posts

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya
error: Content is protected !!