ಬೆಳ್ತಂಗಡಿ: ಶುಕ್ರವಾರ ಸಂಜೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ನೆರಿಯ ಮುಂಡಾಜೆ, ತೋಟತ್ತಾಡಿ, ಚಿಬಿದ್ರೆ, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿದಿದೆ.
ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ.
ರಾಷ್ಟ್ರೀಯ ಹೆದ್ದಾರಿ ಬ್ಲಾಕ್ :
ಮುಂಡಾಜೆ ಗ್ರಾಮದ ನಿಡಿಗಲ್ -ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಕೆಸರುಮಯ ವಾತಾವರಣ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಅಂಬಡ್ತ್ಯಾರು ಎಂಬಲ್ಲಿ ಮಣ್ಣಿನ ರಸ್ತೆಯಲ್ಲಿ ಜಾರಿದ ಟ್ಯಾಂಕರ್ ನಿಂದಾಗಿ ಹಲವು ಸಮಯ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು. ಬೇಕಾಬಿಟ್ಟಿ ದ್ವಿಚಕ್ರವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಇನ್ನಷ್ಟು ಹೆಚ್ಚಲು
ಕಾರಣವಾಯಿತು.ಬಹಲವು ದ್ವಿಚಕ್ರ ವಾಹನ ಸವಾರರು ಉರುಳಿ ಬಿದ್ದ ಘಟನೆಯು ನಡೆಯಿತು.