September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

ಬೆಳ್ತಂಗಡಿ: ಯಕ್ಷ ಶಾಂತಲಾ ಎಂದೇ ಜನಪ್ರಿಯರಾಗಿದ್ದ ತೆಂಕು, ಬಡಗು ಎರಡೂ ತಿಟ್ಟಿನಲ್ಲಿ ಕಲಾವ್ಯವಸಾಯ ಮಾಡಿದ ಪ್ರಸಿದ್ಧ ಸ್ತ್ರೀವೇಷಧಾರಿ ಪಾತಾಳ ವೆಂಕಟರಮಣ ಭಟ್ ಅವರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ ಪ್ರದಾನ ಎ.26 ರಂದು ಉಪ್ಪಿನಂಗಡಿಯ ಪಾತಾಳದ ದುರ್ಗಾಗಿರಿ ಭಜನ ಮಂದಿರದಲ್ಲಿ ಸುಂಕದಕಟ್ಟೆ ಮೇಳದ ವೇದಿಕೆಯಲ್ಲಿ ನಡೆಯಲಿದೆ ಎಂದು ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ಇದರ ಸಂಚಾಲಕ ಉಜಿರೆ ಅಶೋಕ್ ಭಟ್ ತಿಳಿಸಿದ್ದಾರೆ.

91ರ ಹರಯದ ಪಾತಾಳ ವೆಂಕಟರಮಣ ಭಟ್ಟರು ಕಾಂಚನ ಮೇಳ, ಸೌಕೂರು ಮೇಳ, ಮೂಲ್ಕಿ ಮೇಳ, ದೀರ್ಘಕಾಲದ ತಿರುಗಾಟ ಧರ್ಮಸ್ಥಳ ಮೇಳದಲ್ಲಿ ನಡೆಸಿದ್ದಾರೆ. ಸ್ತ್ರೀವೇಷಕ್ಕೆ ಪುರುಷವೇಷಕ್ಕೆ ಸಮದಂಡಿಯಾಗುವಂತೆ ಬೇಲೂರು ಶಿಲಾಬಾಲಿಕೆಯರ ಅಂಗಭಂಗಿಗಳನ್ನು ಸ್ವತಃ ಪರಿಶೀಲಿಸಿ ಅಧ್ಯಯನ ಮಾಡಿ ಯಕ್ಷಗಾನ ಸ್ತ್ರೀವೇಷದ ಆಹಾರ್ಯವನ್ನು ನೃತ್ಯವಿನ್ಯಾಸಕ್ಕೆ ಬೇಕಾದಂತೆ ಸಿದ್ಧಪಡಿಸಿದ ಅವರು ಸೌಂದರ್ಯ ಪ್ರಧಾನ ಸ್ತ್ರೀವೇಷದ ಬಣ್ಣಗಾರಿಕೆಯಲ್ಲೂ ಹೊಸತನದ ಆವಿಷ್ಕಾರ ತಂದಿದ್ದರು. ಮಾಯಾ ಮೋಹಿನಿ, ಮಾಯಾ ಪೂತನಿ, ಮಾಯಾ ಅಜಮುಖಿ ಮೊದಲಾದ ಮಾಯಾ ಸ್ತ್ರಿವೇಷದ ಪಾತ್ರಗಳಿಗೆ ವಿಶಿಷ್ಟ ಕಲ್ಪನೆ ನೀಡಿ ಇತರ ಸ್ತ್ರೀವೇಷಗಳಿಗಿಂತ ಭಿನ್ನ ಎಂದು ನಿರೂಪಿಸಿದ್ದರು. ಗರತಿ ಪಾತ್ರಗಳಲ್ಲಿ ಸೈ ಎನಿಸಿದ್ದರು.

ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಅಮ್ಮುದೇವಿ ಮೊದಲಾದ ಪಾತ್ರಗಳಲ್ಲಿ ಹೆಸರು ಗಳಿಸಿದ್ದರು. ರಂಭೆ, ಊರ್ವಶಿ, ಮೇನಕೆ, ಸತ್ಯಭಾಮೆ, ಸುಭದ್ರೆ, ದ್ರೌಪದಿ, ಸ್ವಯಂಪ್ರಭೆಯಂತಹ ಪಾತ್ರಗಳಲ್ಲಿ ಪರಕಾಯ ಪ್ರವೇಶದಿಂದ ಪ್ರೇಕ್ಷಕರನ್ನು ಬೆರಗಾಗಿಸಿದವರು. ಮಾಸ್ಟರ್ ವಿಠಲ ಅವರ ಶಿಷ್ಯನಾಗಿ ಭರತನಾಟ್ಯ, ಶಿವತಾಂಡವ, ಭಸ್ಮಾಸುರ ಮೋಹಿನಿಯ ನೃತ್ಯಗಳ ಪದಗತಿಯ ಅಭ್ಯಾಸ ಮಾಡಿದ್ದರು. ಮಂಕುಡೆ ಸಂಜೀವ, ಕೋಳ್ಯೂರು ರಾಮಚಂದ್ರ ರಾವ್, ಕರ್ಗಲ್ಲು ಸುಬ್ಬಣ್ಣ ಭಟ್ ಮೊದಲಾದವರ ಸಾಲಿನಲ್ಲಿ ಗುರುತಿಸಿಕೊಂಡವರು. ಯಕ್ಷಗಾನದಿಂದ ದೊರೆತ ಆರ್ಥಿಕ ಸಂಪಾದನೆಯನ್ನು ಈವರೆಗೆ 50 ಮಂದಿ ಕಲಾವಿದರಿಗೆ ತಲಾ 10 ಸಾವಿರ ರೂ.ಗಳಂತೆ ನೀಡಿ ಸಮ್ಮಾನಿಸಿದವರು.

Related posts

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ನಾವೂರು: ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya
error: Content is protected !!