April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

ಅಳದಂಗಡಿ : ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ), ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿಯು ಇತ್ತೀಚೆಗ ಅಳದಂಗಡಿ ಸೊಸೈಟಿಯಲ್ಲಿ ನಡೆಯಿತು.

ಜೆಸಿಐ ಭಾರತದ ರಾಷ್ಟ್ರೀಯ ತರಬೇತಿದಾರರಾದ ಜೆಸಿ ಸುಧಾಕರ್ ಪೂಜಾರಿ ಕಾರ್ಕಳ ಇವರು ಸಂಘದ ಸಿಬ್ಬಂದಿಗಳಿಗೆ ಉದ್ಯೋಗ ಕೌಶಲ್ಯದ ಬಗ್ಗೆ ತರಬೇತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಾಕೇಶ್ ಹೆಗ್ಡೆ ವಹಿಸಿ ಸ್ವಾಗತಿಸಿದರು ಮತ್ತು ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ವಾಚಿಸಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಹಾಗೂ ಪದಾಧಿಕಾರಿಗಳು ಮತ್ತು ಸೊಸೈಟಿಯ ನಿರ್ದೇಶಕರುಗಳು ಉಪಸ್ಥಿತರಿದ್ದರು.

ಸಂಘದ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಮೀರಾ ಇವರು ಧನ್ಯವಾದಗಳು ಸಲ್ಲಿಸಿದರು. ಅತ್ಯುತ್ತಮ ತರಬೇತಿಯನ್ನು ನೀಡಿದ ಸಂಪನ್ಮೂಲ ವ್ಯಕ್ತಿಯಾದ ಸುಧಾಕರ್ ಪೂಜಾರಿಯವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

Related posts

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!