
ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಪ್ರದಾನ ಸಮಾರಂಭವು ಎ. 22 ರಂದು ಬಳಂಜ ಯುವಕ ಮಂಡಲದಲ್ಲಿ ನಡೆಯಿತು.
ನೂತನ ಅಧ್ಯಕ್ಷ ಸುಕೇಶ್ ಪೂಜಾರಿ ಮತ್ತು ತಂಡಕ್ಕೆ ಯುವಕ ಮಂಡಲದ ಪುಸ್ತಕ ನೀಡುವ ಮೂಲಕ ಯುವಕ ಮಂಡಲದ ಜವಾಬ್ದಾರಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಉಸ್ಮಾನ್ ಕೆ ವಹಿಸಿ ಯುವಕ ಮಂಡಲವನ್ನು ಕಟ್ಟಿ ಬೆಳೆಸಿದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ, ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಮನೋಹರ್ ಬಳಂಜ, ಉಪಾಧ್ಯಕ್ಷ ವಿನು ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್,ಟ್ರಷ್ಟಿಗಳಾದ ರಾಕೇಶ್ ಹೆಗ್ಡೆ, ಸಂತೋಷ್ ಕುಮಾರ್ ಕಾಪಿನಡ್ಕ, ಪ್ರವೀಣ್ ಹೆಚ್.ಎಸ್, ಕಾನೂನು ಸಲಹೆಗಾರರಾದ ಸತೀಶ್ ರೈ ಬಾರ್ದಡ್ಕ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಶಾಲಾಬಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ, ದೀಪಕ್ ಹೆಚ್.ಡಿ ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ,ಗ್ರಾಮಸ್ಥರು ಉಪಸ್ಥಿತರಿದ್ದರು.