22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಗುರುವಾಯನಕೆರೆ: ವಿಜ್ಞಾನ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಗಳಲ್ಲಿ ವಿಶೇಷ ಸಾಧನೆ ಮಾಡಿ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಹತ್ತನೆಯ ತರಗತಿಯ ತನಕ ಸರಕಾರಿ ಶಾಲೆಯಲ್ಲಿ ಓದಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ತೀರ್ಮಾನಿಸಿದೆ.


ಗ್ರಾಮೀಣ ಪ್ರದೇಶದ, ಅವಕಾಶ ವಂಚಿತ ವಿದ್ಯಾರ್ಥಿಗಳ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕನಸು ನನಸು ಮಾಡಲು ಯೋಗ್ಯ ನೀಟ್ ಮತ್ತು ಜೆ ಇ ಇ/ ಸಿ ಇ ಟಿ ಕೋಚಿಂಗ್ ನೀಡಲು ತೀರ್ಮಾನಿಸಲಾಗಿದೆ. ರಾಷ್ಟ್ರಮಟ್ಟದ ಉನ್ನತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ AIIMS, ರಾಷ್ಟ್ರ ಮಟ್ಟದ ಉನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ IIT, NIIT ಗಳ ಪ್ರವೇಶಾತಿ ಪರೀಕ್ಷೆಗಳಿಗೆ ತರಬೇತು ಗೊಳಿಸಿ ವಿದ್ಯಾರ್ಥಿಗಳ ಕನಸನ್ನು ನನಸು ಮಾಡಲು ಎಕ್ಸೆಲ್ ಪದವಿಪೂರ್ವ ಕಾಲೇಜು ಅಣಿಗೊಂಡಿದೆ.

ಅದೇ ರೀತಿ ವಾಣಿಜ್ಯ ವಿಭಾಗದಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಲು ಸಿ. ಎ ಫೌಂಡೇಶನ್ ಕೋರ್ಸ್, ಕಂಪನಿ ಸೆಕ್ರೆಟರಿ ಹುದ್ದೆಗಾಗಿ ಸಿ. ಎಸ್ ಫೌಂಡೇಶನ್ ಹಾಗೂ ರಾಷ್ಟ್ರ ಮಟ್ಟದ ಕಾನೂನು ಪದವಿ ಪ್ರವೇಶಕ್ಕಾಗಿ ಕ್ಲಾಟ್ ಕೋಚಿಂಗ್ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9880899769, 9902284110 ಸಂಪರ್ಕಿಸಬಹುದು ಎಂದು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
error: Content is protected !!