ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ನಾವೂರು: ನಾವೂರು ಗ್ರಾಮದ ಪುಳಿತ್ತಡಿ, ಕುದ್ರೋಳಿ ಪ್ರದೇಶದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮ್ಮ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬ ಬೇಡಿಕೆಯನ್ನು ಮುಂದಿಟ್ಟು ಈ ಬಾರಿಯ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ನಿರ್ಧರಿಸಿ, ತಮ್ಮ ಪ್ರದೇಶದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.


ಈ ಪರಿಸರದಲ್ಲಿ 22 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬದವರಿದ್ದಾರೆ. ಸುಮಾರು ೧೦೦ಮಂದಿ ಮತದಾರರಿದ್ದಾರೆ. ದಶಕಗಳಿಂದ ಈ ಜನರು ತಮ್ಮ ಪ್ರದೇಶಕ್ಕೆ ರಸ್ತೆ ಹಾ ಗೂ ವಿದ್ಯುತ್ ಸಂಪರ್ಕ ಒದಗಿಸುವಂತೆ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ ಕುದುರೇಮುಖ ರಾಷ್ಟ್ರೀಯ ಉದ್ಯಾನವದ ಒಳಗಿರುವ ಈ ಕುಟುಂಬಗಳಿಗೆ ಇನ್ನೂ ಯಾವುದೇ ಮೂಲಭೂತ ಸೌಲಭ್ಯಗಳು ಲಭಿಸಿಲ್ಲ. ತಮ್ಮ ಬೇಡಿಕೆಗಳ ಬಗ್ಗೆ ಗ್ರಾಮ ಪಂಚಾಯತಿನಿಂದ ಹಿಡಿದು ಪ್ರಧಾನಿಯವರೆಗೆ ಎಲ್ಲರಿಗೂ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.


ಇದರಿಂದ ಬೇಸತ್ತ ನಾವೂರು ಗ್ರಾಮದ ಅಲ್ಯ, ಪುಳಿತ್ತಡಿ, ಎರ್ಮಲೆ ಮಂಜಲ,ಕುದ್ರೋಳಿ, ಕಾಸರೋಳಿ ಪರಿಸರದ ಆದಿವಾಸಿ ಕುಟುಂಬಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತವನ್ನು ಚಲಾಯಿಸುವುದಾಗಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

Leave a Comment

error: Content is protected !!