23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಏರ್ಪಡಿಸಲಾಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಶೈಲೇಶ್ ಕುಮಾರ್ ಡಿ ಎಚ್ ಇವರು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಇವರು ವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಕೆ, ಸಂಸ್ಕೃತಿಕ ಸಂಘದ ಸಂಚಾಲಕರಾದ ಪ್ರೊಫೆಸರ್ ಸುರೇಶ್ ವಿ ಹಾಗೂ ಹಿರಿಯ ಪ್ರಾಧ್ಯಾಪಕರಾದ ಡಾಕ್ಟರ್ ಚೇತನ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾ ಸಾಧಕರಾದ ಭರತೇಶ್, ಯಶಸ್, ಮಹಾವೀರ, ತುಷಾರ್, ನಿವೇದಿತಾ, ನವೀನ್ ಮತ್ತಿತರರು ಕ್ರೀಡಾ ಜ್ಯೋತಿಯನ್ನು ಬೆಳಗಿಸುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪ್ರಾಧ್ಯಾಪಕರುಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಕುಮಾರಿ ದೀಪ ಸ್ವಾಗತಿಸಿದರು.

Related posts

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya
error: Content is protected !!