24.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಜಿರೆ ಬಳಿ ಎ.24 ರ ಮಧ್ಯಾಹ್ನ ಸಂಭವಿಸಿದೆ.

ಉಜಿರೆ ಚಾರ್ಮಾಡಿ ರಸ್ತೆಯ ಅಜಿತ್ ನಗರ ಕ್ರಾಸ್ ಬಳಿ ವ್ಯಕ್ತಿಯೊಬ್ಬರು ರಸ್ತೆ ಬದಿಯ ಚರಂಡಿಯ ಸ್ಲ್ಯಾಬ್ ಮೇಲೆ ಕುಳಿತಿದ್ದ ಸುಮಾರು 35-40 ವರ್ಷದ ವ್ಯಕ್ತಿ ಅಲ್ಲೆ ರಸ್ತೆಗೆ ಉರುಳಿ ಬಿದ್ದು ಸಾವನ್ನಪ್ಪಿದ್ದು ಇದನ್ನು ಗಮನಿಸಿದ ಸ್ಥಳೀಯರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು  ಪರಿಶೀಲನೆ ನಡೆಸಿ‌ದ್ದಾರೆ. ಮೃತ ದೇಹ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ ಕಳುಹಿಸಿಕೊಡಲಾಗಿದೆ.

ಮೃತ ವ್ಯಕ್ತಿ ಅಪರಿಚಿತನಂತೆ ಕಾಣುತಿದ್ದು ಧರ್ಮಸ್ಥಳ ವಿಪತ್ತು ತಂಡದ ಸದಸ್ಯರು ಹಾಗೂ ಸ್ಥಳೀಯರು ಪೊಲೀಸರಿಗೆ ಸಹಕಾರ ನೀಡಿದ್ದಾರೆ.

ಅಪರಿಚಿತ ಗಂಡಸಿನ ಮೃತದೇಹದ ವಾರಸುದಾರರ ಪತ್ತೆಗೆ ಸಹಕರಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya
error: Content is protected !!