September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

ಬೆಳ್ತಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಎ.23ರಂದು ನಡೆದಿದೆ.

ಮೂಲತಃ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ಕಲಿಯುತ್ತಿದ್ದು ಮಂಗಳವಾರ ರಾತ್ರಿ ಖಾಸಗಿ ಬಸ್ಸಿನಲ್ಲಿ ಊರಿಗೆ ಪ್ರಯಾಣಿಸಿದ್ದರು. ಬಸ್‌ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ವಿದ್ಯಾರ್ಥಿನಿಯ ಮೈಮೇಲೆ ಸಹಪ್ರಯಾಣಿಕ ಕೈ ಮಾಡಿರುವುದು ಕಂಡು ಬಂತು. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ ಯಾವುದೇ ಸ್ಪಂದನೆ ದೊರೆಯದಿದ್ದಾಗ, ಬಸ್ಸಿನಲ್ಲಿದ್ದ ಕೆಲವು ಸಹ ಪ್ರಯಾಣಿಕರು ನೆರವಿಗೆ ಧಾವಿಸಿ ಆತನನ್ನು ವಿಚಾರಿಸಿದಾಗ ಬೆಳ್ತಂಗಡಿಯ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂದು ತಿಳಿಸಿದ್ದ. ಮುಂದಕ್ಕೆ ದಾರಿ ಮಧ್ಯೆ ಸಿಗುವ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವ ಎಂದು ಆಕೆ ಹೇಳಿದ ಬಳಿಕ ಆರೋಪಿ ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದಾನೆಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಲಭ್ಯ ಮಾಹಿತಿಗಳನ್ನಾಧರಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ  ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಸವಣಾಲು: ಹೇರಾಜೆ ನಿವಾಸಿ ರಘು ಶೆಟ್ಟಿ ನಿಧನ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya
error: Content is protected !!