25.3 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿರಾಜಕೀಯ

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ೨೪೧ ಮತಗಟ್ಟೆಗಳಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದೆ.
ಕಳೆದ ಎರಡು ತಿಂಗಳಿನಿಂದ ಬಿರುಬಿಸಿಲು ಇರುವುದರಿಂದ ಬೆಳಗ್ಗಿನ ಹೊತ್ತು ಹಾಗೂ ಸಂಜೆಯ ಹೊತ್ತು ಮತಗಟ್ಟೆಗಳಲ್ಲಿ ಮತದಾರರು ಹೆಚ್ಚಿನ ಸಂಖೆಯಲ್ಲಿ ಆಗಮಿಸಿ ಮತದಾನ ಮಾಡಲಿದ್ದಾರೆ. ಬೆಳಗ್ಗಿನ ಹೊತ್ತಿನಲ್ಲಿ ಈ ಬಾರಿ ವಿವಿಧ ಮತಗಟ್ಟೆಗಳಿಗೆ ಅಧಿಕ ಸಂಖ್ಯೆಲ್ಲಿ ಮತದಾರರು ಆಗಮಿಸಿ ಮತದಾನ ಮಾಡುತ್ತಿದ್ದಾರೆ. ತಾಲೂಕು ಸಹಾಯಕ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ಮತದಾನಕ್ಕೆ ಬೇಕಾದ ಪೂರಕ ವ್ಯವಸ್ಥೆಗಳನ್ನು ಮಾಡಿರುವುದರಿಂದ ಮತದಾನಕ್ಕೆ ಹೆಚ್ಚಿನ ಅನುಕೂಲವಾಗಿದೆ.

ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲೂ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆಯನ್ನು ಒದಗಿಸಲಾಗಿದೆ. ನಕ್ಸಲ್ ಏರಿದ ಮತಗಳಲ್ಲಿ ವಿಶೇಷ ನಿಗ ವಹಿಸಲಾಗಿದೆ. ತಾಲೂಕಿನಲ್ಲಿ ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಸಂಜೆ ೬ರ ತನಕ ನಡೆಯಲಿದೆ

Related posts

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ