ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ: ಎಲ್ಲಾ ಉದ್ಯೋಗ ಕ್ಷೇತ್ರದಲ್ಲಿ ಕಂಪ್ಯೂಟರ್ ಶಿಕ್ಷಣ ಅತಿ ಮುಖ್ಯವಾಗಿದೆ. ಹಿಂದೆ ವಿದ್ಯೆ ಇಲ್ಲದಿದ್ದರೆ ಪಶುವಿಗೆ ಸಮಾನ ಎಂದಾಗಿತ್ತು. ಆದರೆ ಈಗ ವಿದ್ಯೆಯ ಜೊತೆಗೆ ಕಂಪ್ಯೂಟರ್ ಶಿಕ್ಷಣ ಇಲ್ಲದಿದ್ದರೆ ಪಶುವಿಗೆ ಸಮಾನ ಎನ್ನುವಂತಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಕಂಪ್ಯೂಟರ್ ಶಿಕ್ಷಣ ತುಂಬಾ ಮುಖ್ಯವಾಗಿದೆ. ಇಲ್ಲಿಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ಜೊತೆಗೆ ವೃತ್ತಿಗೆ ಪೂರಕ ತರಬೇತಿಯನ್ನು ಆಯೋಜಿಸಲಾಗುತ್ತಿದೆ. ಇದು ನಿಮ್ಮ ಮುಂದಿನ ಉದ್ಯೋಗಕ್ಕೆ ದಾರಿದೀಪವಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಲಾಯಿಲ ತರಬೇತಿ ಕೇಂದ್ರದಲ್ಲಿ ವಾಣಿ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಯದುಪತಿ ಗೌಡ ಇವರು ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು. ಒಟ್ಟು 31 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದುಕೊಂಡಿರುತ್ತಾರೆ. ಈ ಸಂದರ್ಭದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್ ಕೆ. ಕಛೇರಿ ಪ್ರಬಂಧಕ ಅಣ್ಣು ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರರಾದ ಜಯಶ್ರೀ ಇವರು ನಿರ್ವಹಣೆ ಮಾಡಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.

Leave a Comment

error: Content is protected !!