ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ಸಂಭ್ರಮವು ಮೇ.3 ರಿಂದ ಆರಂಭಗೊಂಡು ಮೇ.12 ರವರೆಗೆ ನಡೆಯಲಿದ್ದು, ಇದರ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು ಪೊಲೀಸ್ ಅಧಿಕಾರಿಗಳ ವಿಶೇಷ ಸಭೆಯು ಏ.30 ರಂದು ಕಾಜೂರಿನ ಆಡಳಿತ ಕಚೇರಿಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅವರು ಮಾತನಾಡಿ, ಕಾಜೂರು ಉರೂಸ್ ಸಂಭ್ರಮಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಅಲ್ಲದೆ ಕೇರಳ, ತಮಿಳುನಾಡು ಮೊದಲಾದೆಡೆಗಳಿಂದಲೂ ಅನೇಕ ಭಕ್ತರು ಜಾತಿ ಧರ್ಮದ ಭೇದವಿಲ್ಲದೆ ಆಗಮಿಸುತ್ತಾರೆ. ಅವರಿಗೆ ತೊಂದರೆಯಾಗದ ರೀತಿಯಲ್ಲಿ ನಾವು ವ್ಯವಸ್ಥೆ ರೂಪಿಸಲಿದ್ದೇವೆ. ಈ‌ ವೇಳೆ ಪೊಲೀಸ್ ಇಲಾಖೆಯಿಂದಲೂ ನಮಗೆ ಹೆಚ್ಚಿನ ಸಹಕಾರ ಬೇಕಾಗಿದೆ ಎಂದರು.


ಸಭೆ ನಡೆಸಿಕೊಟ್ಟ ಬೆಳ್ತಂಗಡಿ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ ಸುಬ್ಬಾಪುರಮಠ್ ಅವರು ಮಾತನಾಡಿ, ಕಾಜೂರು ಕ್ಷೇತ್ರದ ಬಗ್ಗೆ ಅನೇಕ ಕಡೆಗಳಲ್ಲಿ ಪ್ರಸಿದ್ಧಿ ಇರುವುದನ್ನು ನಾನು ಮನಗಂಡಿದ್ದೇನೆ. ಇಲ್ಲಿನ ಅಭಿಮಾನಿಗಳು ಹಾಗೂ ಭಕ್ತರು ಇರುವುದನ್ನೂ ನಾನು ಕೇಳಿ ತಿಳಿದುಕೊಂಡಿದ್ದೇನೆ.
ಇಲ್ಲಿನ ಉರೂಸ್ ಕಾರ್ಯಕ್ರಮ ಸುಸೂತ್ರವಾಗಿ ನಡೆಯಬೇಕಾಗಿದೆ. ಅದಕ್ಕೆ ಪೊಲೀಸ್ ಇಲಾಖೆ ಕಡೆಯಿಂದ ಹೆಚ್ಚಿನ ಕಾಳಜಿ ವಹಿಸಲಾಗುವುದು. ಸಮಿತಿ ಮತ್ತು‌ ಈ ಊರಿನವರ ಸಹಕಾರ ಇದ್ದರೆ ಮಾತ್ರ ಈ ಕಾರ್ಯ ಯಶಸ್ವಿಯಾಗಿ ಮಾಡಬಹುದು. ಒಟ್ಟಿನಲ್ಲಿ ಈ ವರ್ಷದ ಉರೂಸ್ ಕಾರ್ಯಕ್ರಮಗಳನ್ನು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹಳಿ ತಪ್ಪದಂತೆ ನಾವೆಲ್ಲ ನಡೆಸಿಕೊಡೋಣ ಎಂದರು.


ಈ ಸಂದರ್ಭ ಉರೂಸ್ ಸಮಿತಿ ವತಿಯಿಂದ ಇನ್ಸ್‌ಪೆಕ್ಟರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪೊಲೀಸ್ ಇಲಾಖೆಯಿಂದ ರೈಟರ್ ಧನಂಜಯ್, ಎಸ್.ಬಿ ಆನಂದ್ ಭಾಗಿಯಾಗಿದ್ದರು.
ಉರೂಸ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು, ಪ್ರಧಾನ ಕಾರ್ಯದರ್ಶಿ ಜೆ‌.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಜೊತೆ ಕಾರ್ಯದರ್ಶಿ ಶಾಹುಲ್ ಹಮೀದ್ ಕಿಲ್ಲೂರು, ಕೋಶಾಧಿಕಾರಿ ಕೆ.ಎಮ್ ಕಮಾಲ್ ಕಾಜೂರು ಹಾಗೂ ಕಾಜೂರು ಕಿಲ್ಲೂರು ಜಂಟಿ ಉರೂಸ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya
error: Content is protected !!