30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

ಬೆಳ್ತಂಗಡಿ: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ ಅವರ ನೇತೃತ್ವದಲ್ಲಿ ನಡೆದ ಸ್ಟೀನಿಂಗ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಿಗೆ ಹೊಂದಿರುವ (ಪೊಲೀಸ್‌ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಆಯುಧ ಪರವಾನಿಗೆದಾರರು ತಮ್ಮ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ / ಅಧಿಕೃತ ಕೋವಿ ಹಾಗೂ ಮದ್ದುಗುಂಡು ವ್ಯಾಪರಸ್ಥರಲ್ಲಿ ಠೇವಣೆ ಇರಿಸಿದ್ದು ಈ ಆಯುಧಗಳನ್ನು ಹಿಂಪಡೆಯಲು ಆಯುಧ ಪರವಾನಿಗೆದಾರರಿಗೆ ಏ.29ರ ಸೋಮವಾರದಿಂದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಮುಲೈ ಮುಹಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.

ಷರತ್ತುಗಳು: ಯಾವುದೇ ಮೆರವಣಿಗೆ, ಜಾತ್ರೆ ಇತ್ಯಾದಿಗಳಲ್ಲಿ ಶಸ್ತ್ರಾಸ್ತ್ರವನ್ನು ಒಯ್ಯಲು ಅವಕಾಶವಿರುವುದಿಲ್ಲ. ಬೆಳೆಗಳ ರಕ್ಷಣೆಗಾಗಿ ಸದ್ರಿ ಆಯುಧಗಳನ್ನು ಮಾತ್ರ ಬಳಸತಕ್ಕದ್ದು. ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಬಹಿರಂಗವಾಗಿ ಎಲ್ಲೂ ಪ್ರದರ್ಶಿಸುವಂತಿಲ್ಲ. ಸಾರ್ವಜನಿಕರನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆದರಿಸಲು ಶಸ್ತ್ರಾಸ್ತ್ರವನ್ನು ಬಳಸಬಾರದು. ಯಾವುದೇ ಸಂದರ್ಭದಲ್ಲಿ ಅವಶ್ಯವೆನಿಸಿದಲ್ಲಿ ಪೊಲೀಸ್ ಅಧಿಕಾರಿಗಳು/ ಸರಕಾರಿ ಅಧಿಕಾರಿಗಳಿಗೆ ತಪಾಸಣೆ ವೇಳೆ ಹಾಜರುಪಡಿಸತಕ್ಕದ್ದು ಮತ್ತು ತಪಾಸಣೆಗೆ ಸಹಕರಿಸಿ ಪೂರಕ ದಾಖಲೆಗಳನ್ನು ಒದಗಿಸತಕ್ಕದ್ದು. ಪರವಾನಿಗೆದಾರರು ಮೇಲಿನ ಶರ್ತಗಳನ್ನು ಉಲ್ಲಂಘನೆ ಮಾಡಿ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿರುವುದು ಕಂಡು ಬಂದಲ್ಲಿ, ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಯಾವುದೇ ಮುನ್ಸೂಚನೆ ನೀಡದೆ ವಶಪಡಿಸಿಕೊಳ್ಳಲಾಗುವುದು.

ನೀತಿ ಸಂಹಿತೆಯು ಜಾರಿಯಲ್ಲಿರುವ ಸಮಯದಲ್ಲಿ ಆಯುಧ ಪರವಾನಿಗೆದಾರರು ಯಾವುದೇ ಷರತ್ತುಗಳನ್ನು ಉಲ್ಲೇಖಿಸಿದಲ್ಲಿ ಐಪಿಸಿ ಸೆಕ್ಷನ್ 188 ರಂತೆ ಪ್ರಕರಣ ದಾಖಲಿಸಲು ಹಾಗೂ ಪರವಾನಿಗೆ ರದ್ದುಪಡಿಸಲು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Related posts

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya
error: Content is protected !!