September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಮೇ 1 ರಂದು ಬುಧವಾರ ಸಂಜೆ ಗಂಟೆ 6.45 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52 ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.
ಈಗಾಗಲೆ 123 ಜೊತೆ ವಧು-ವರರು ವಿವಾಹಕ್ಕೆ ಹೆಸರು ನೋಂದಾಯಿಸಿ ಅವರು ನೀಡಿದ ಪ್ರಮಾಣಪತ್ರಗಳು ಕ್ರಮಬದ್ಧವಾಗಿದ್ದಲ್ಲಿ ಸಾಮೂಹಿಕ ವಿವಾಹದಲ್ಲಿ ಮದುವೆಗೆ ಅವಕಾಶ ನೀಡಲಾಗುವುದು.
ವರನಿಗೆ ಧೋತಿ, ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಮತ್ತು ಮಂಗಳಸೂತ್ರ ನೀಡಲಾಗುವುದು.
ಬೆಳಿಗ್ಗೆ ಯಿಂದಲೆ ಧರ್ಮಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಧು-ವರರಿಗೆ ಸೀರೆ, ರವಿಕೆಕಣ, ಧೋತಿ ಮತ್ತು ಶಾಲು ವಿತರಿಸುವರು.


ಸಂಜೆ 5 ಗಂಟೆಗೆ ವಧೂ-ವರರು ಭವ್ಯ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ಹೋಗುವರು. ಅಲ್ಲಿ ಅವರವರ ಜಾತಿಸಂಪ್ರದಾಯದಂತೆ ಒಂದೇ ಮುಹೂರ್ತದಲ್ಲಿ ಸಾಮೂಹಿಕ ವಿವಾಹ ನಡೆಯುತ್ತದೆ.
ಹೆಗ್ಗಡೆಯವರು ಹಾಗೂ ಚಲನಚಿತ್ರನಟ ದೊಡ್ಡಣ್ಣ ಶುಭಾಶಂಸನೆ ಮಾಡುವರು. ಬಳಿಕ ನೂತನ ದಂಪತಿಗಳು ದೇವರದರ್ಶನ ಮಾಡಿ, ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿ ಊರಿಗೆ ತೆರಳುವರು.


ಸಾಮೂಹಿಕ ವಿವಾಹದಲ್ಲಿ ಮದುವೆ ಆದವರಿಗೆ ಸರ್ಕಾರದ ವತಿಯಿಂದ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡಲಾಗುವುದು.
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಆರಂಭಿಸಿದ್ದು, ಪ್ರತಿ ವರ್ಷ ಇದನ್ನು ನಡೆಸಲಾಗುತ್ತದೆ. ಕಳೆದ ವರ್ಷದ ವರೆಗೆ 12777 ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ದಾಂಪತ್ಯಜೀವನ ನಡೆಸುತ್ತಿದ್ದಾರೆ.

Related posts

ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ನೂತನ ಟ್ರಸ್ಟಿಗಳ ಪದಗ್ರಹಣ

Suddi Udaya

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!