27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

ಬೆಳ್ತಂಗಡಿ: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ ಅವರ ನೇತೃತ್ವದಲ್ಲಿ ನಡೆದ ಸ್ಟೀನಿಂಗ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಿಗೆ ಹೊಂದಿರುವ (ಪೊಲೀಸ್‌ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಆಯುಧ ಪರವಾನಿಗೆದಾರರು ತಮ್ಮ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ / ಅಧಿಕೃತ ಕೋವಿ ಹಾಗೂ ಮದ್ದುಗುಂಡು ವ್ಯಾಪರಸ್ಥರಲ್ಲಿ ಠೇವಣೆ ಇರಿಸಿದ್ದು ಈ ಆಯುಧಗಳನ್ನು ಹಿಂಪಡೆಯಲು ಆಯುಧ ಪರವಾನಿಗೆದಾರರಿಗೆ ಏ.29ರ ಸೋಮವಾರದಿಂದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಮುಲೈ ಮುಹಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.

ಷರತ್ತುಗಳು: ಯಾವುದೇ ಮೆರವಣಿಗೆ, ಜಾತ್ರೆ ಇತ್ಯಾದಿಗಳಲ್ಲಿ ಶಸ್ತ್ರಾಸ್ತ್ರವನ್ನು ಒಯ್ಯಲು ಅವಕಾಶವಿರುವುದಿಲ್ಲ. ಬೆಳೆಗಳ ರಕ್ಷಣೆಗಾಗಿ ಸದ್ರಿ ಆಯುಧಗಳನ್ನು ಮಾತ್ರ ಬಳಸತಕ್ಕದ್ದು. ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಬಹಿರಂಗವಾಗಿ ಎಲ್ಲೂ ಪ್ರದರ್ಶಿಸುವಂತಿಲ್ಲ. ಸಾರ್ವಜನಿಕರನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆದರಿಸಲು ಶಸ್ತ್ರಾಸ್ತ್ರವನ್ನು ಬಳಸಬಾರದು. ಯಾವುದೇ ಸಂದರ್ಭದಲ್ಲಿ ಅವಶ್ಯವೆನಿಸಿದಲ್ಲಿ ಪೊಲೀಸ್ ಅಧಿಕಾರಿಗಳು/ ಸರಕಾರಿ ಅಧಿಕಾರಿಗಳಿಗೆ ತಪಾಸಣೆ ವೇಳೆ ಹಾಜರುಪಡಿಸತಕ್ಕದ್ದು ಮತ್ತು ತಪಾಸಣೆಗೆ ಸಹಕರಿಸಿ ಪೂರಕ ದಾಖಲೆಗಳನ್ನು ಒದಗಿಸತಕ್ಕದ್ದು. ಪರವಾನಿಗೆದಾರರು ಮೇಲಿನ ಶರ್ತಗಳನ್ನು ಉಲ್ಲಂಘನೆ ಮಾಡಿ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿರುವುದು ಕಂಡು ಬಂದಲ್ಲಿ, ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಯಾವುದೇ ಮುನ್ಸೂಚನೆ ನೀಡದೆ ವಶಪಡಿಸಿಕೊಳ್ಳಲಾಗುವುದು.

ನೀತಿ ಸಂಹಿತೆಯು ಜಾರಿಯಲ್ಲಿರುವ ಸಮಯದಲ್ಲಿ ಆಯುಧ ಪರವಾನಿಗೆದಾರರು ಯಾವುದೇ ಷರತ್ತುಗಳನ್ನು ಉಲ್ಲೇಖಿಸಿದಲ್ಲಿ ಐಪಿಸಿ ಸೆಕ್ಷನ್ 188 ರಂತೆ ಪ್ರಕರಣ ದಾಖಲಿಸಲು ಹಾಗೂ ಪರವಾನಿಗೆ ರದ್ದುಪಡಿಸಲು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Related posts

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya
error: Content is protected !!