ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಯುವ ಸಮುದಾಯದ ಯುವ ಮನಸ್ಸುಗಳನ್ನು ಒಂದು ಗೂಡಿಸುವ ಯೋಜನೆ. ಇದು ವಿದ್ಯಾರ್ಥಿಗಳಲ್ಲಿ ಶ್ರಮದ ಅನುಭವವನ್ನು ನೀಡುತ್ತದೆ.” ಎಂದು ಜವಾಹರಲಾಲ್ ನೆಹರೂ ಪ್ರೌಢಶಾಲೆ ಮಕ್ಕಿ ಶಿರ್ತಾಡಿ ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾರಾದ ಟಿ. ಕೆ.ವೆಂಕಟ ರಾವ್ ಅವರು ಹೇಳಿದರು.
ಅವರು ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಸಮಾರೋಪ ಭಾಷಣದಲ್ಲಿ ಮಾತನಾಡಿದರು.
ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಸಂತ ಅಂತೋನಿ ಪದವಿ ಕಾಲೇಜಿನ ಉಪಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಬಿರುಬಿಸಿಲನ್ನು ಲೆಕ್ಕಿಸದೆ ಮಾಡಿದ ಕೆಲಸವನ್ನು ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಜವಾಹರ್ ಲಾಲ್ ನೆಹರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಜಯರಾಮ್ ಎಂ., ಶ್ರೀಕಾಂತ್ ಭಟ್ ಮಂತ್ರಸಧನ ಮಕ್ಕಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ಎಸ್.ಡಿ. ಎಂ.ಸಿ ಅಧ್ಯಕ್ಷ ಮುಕೇಶ್, ಉಪಾಧ್ಯಕ್ಷೆ ಶ್ರೀಮತಿ ಸುಮಲತಾ, ಮುಖ್ಯೋಪಾಧ್ಯಾರಾದ ಶ್ರೀಮತಿ ಬೇಬಿ, ಸಹಶಿಕ್ಷಕರಾದ ಗಣರಾಜ್, ಎನ್ ಎಸ್ ಎಸ್ ಕಾರ್ಯದರ್ಶಿಗಳಾದ ಕು.ವಿಘ್ನೇಶ್ ಆಚಾರ್ಯ, ಕುಮಾರಿ. ಅನ್ವಿತಾ ರಾವ್, ಹಾಗೂ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರಾದ ಕೇಶವ್ ಶರ್ಮ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ದಿನೇಶ್ ಬಿ.ಕೆ ಬಳಂಜ ಶಿಬಿರಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಅವಿನಾಶ್ ಲೋಬೊ ಸ್ವಾಗತಿಸಿದರು. ಎನ್ ಎಸ್ ಎಸ್ ಸ್ವಯಂಸೇವಕಿ ಕು.ದಿವಿತಾ ಧನ್ಯವಾದ ಸಲ್ಲಿಸಿದರು. ಉಪನ್ಯಾಸಕ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು .