ಬೆಳ್ತಂಗಡಿ: ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60ವ) ಅವರು ಮೇ 1 ರಂದು ನಿಧನರಾಗಿದ್ದಾರೆ.
ಬುಧವಾರ ರಾತ್ರಿ ಕುಂದಾಪುರ ಸಮೀಪದ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು ಇನ್ನೇನು ಮುಖದ ಬಣ್ಣವನ್ನು ತೆಗೆಯುತ್ತಿರುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
ಇವರು ಧರ್ಮಸ್ಥಳ ಮೇಳದಲ್ಲಿ ಸುಮಾರು 42 ವರ್ಷಗಳಿಂದ ನಿರಂತರ ಕಲಾವಿದರಾಗಿ ಸೇವೆ ಸಲ್ಲಿಸಿದ್ದರು.