24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

ಬೆಳ್ತಂಗಡಿ: ಬೀದ‌ರ್ ಲೋಕಸಭಾ ಕ್ಷೇತ್ರದ ಆಳಂದದಲ್ಲಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನಾಗಿಸಲು, ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಅವರನ್ನು ಅತ್ಯಧಿಕ ಮತಗಳ ಅಂತರಗಳಿಂದ ಗೆಲ್ಲಿಸುವಂತೆ ಬೀದರ್ ಲೋಕಸಭಾ ಕ್ಷೇತ್ರದ ಮತದಾರರಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರೊಂದಿಗೆ ಮನವಿ ಮಾಡಲಾಯಿತು.


ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಹಾಗೂ ಶಾಸಕ ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ಮಾಜಿ ಶಾಸಕ ಎಂ.ವೈ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್, ರಾಜ್ಯ ಕಾರ್ಯದರ್ಶಿ ತಮ್ಮೆಶ್ ಗೌಡ, ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya
error: Content is protected !!