24 C
ಪುತ್ತೂರು, ಬೆಳ್ತಂಗಡಿ
April 3, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮ ಮರಳು ಸಂಗ್ರಹ ಮಾಡುತ್ತಿದ್ದ ಬಗ್ಗೆ ಆರೋಪಿತ ಶ್ರೀಧರ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಂಗ್ರಹಿಸುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೇ.1 ರಂದು ಮಧ್ಯಾಹ್ನ ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಸಮರ್ಥರ ಗಾಣಿಗೇರ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಪಟ್ರಮೆ ಹೊಳೆಯಿಂದ ಅಕ್ರಮವಾಗಿ ಮರಳನ್ನು ಕಳವು ಮಾಡಿರುವ 40 ಪ್ಲಾಸ್ಟಿಕ್ ಬುಟ್ಟಿಯಷ್ಟು ಮರಳು ರಾಶಿ ಕಂಡುಬಂದಿದ್ದು ಈ ಬಗ್ಗೆ ಆರೋಪಿತ ಶ್ರೀಧರ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya
error: Content is protected !!