March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಪ್ರತಿಭಾವಂತ ಕಲಾವಿದರಾದ ಪುತ್ತೂರು ಗಂಗಾಧರರವರು ಹೃದಯಾಘಾತದಿಂದ ನಿಧನರಾದ ವಿಚಾರ ತಿಳಿದು ಆಘಾತವಾಯಿತು.
ತನ್ನ 14 ನೇ ವಯಸ್ಸಿನಲ್ಲಿ ಕ್ಷೇತ್ರದಲ್ಲಿರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಯಾಗಿ ಸೇರಿದ ಅವರು ವಿದ್ಯಾರ್ಜನೆ ಮುಗಿದ ಬಳಿಕ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಕಲಾವಿದರಾಗಿ 42 ವರ್ಷಗಳ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಹಾಸ್ಯದಿಂದ ಪ್ರಾರಂಭಿಸಿ ರಾಜನ ಪಾತ್ರದವರೆಗೆ ಎಲ್ಲಾ ತರಹದ ವೇಷವನ್ನು ಮಾಡಬಲ್ಲ ಸಮರ್ಥ ಕಲಾವಿದರಾಗಿದ್ದರು.

ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗದವರಿಗೆ ಉಂಟಾದ ದು:ಖವನ್ನು ಸಹಿಸುವ ಶಕ್ತಿ, ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಭಜನಾ ಮಂಡಳಿಯಿಂದ ಕುಣಿತ ಭಜನೆ ತರಬೇತುದಾರ ದಯಾನಂದ ದೇವಾಡಿಗರವರಿಗೆ ಗುರುವಂದನಾ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!