April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಪ್ರತಿಭಾವಂತ ಕಲಾವಿದರಾದ ಪುತ್ತೂರು ಗಂಗಾಧರರವರು ಹೃದಯಾಘಾತದಿಂದ ನಿಧನರಾದ ವಿಚಾರ ತಿಳಿದು ಆಘಾತವಾಯಿತು.
ತನ್ನ 14 ನೇ ವಯಸ್ಸಿನಲ್ಲಿ ಕ್ಷೇತ್ರದಲ್ಲಿರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಯಾಗಿ ಸೇರಿದ ಅವರು ವಿದ್ಯಾರ್ಜನೆ ಮುಗಿದ ಬಳಿಕ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಕಲಾವಿದರಾಗಿ 42 ವರ್ಷಗಳ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಹಾಸ್ಯದಿಂದ ಪ್ರಾರಂಭಿಸಿ ರಾಜನ ಪಾತ್ರದವರೆಗೆ ಎಲ್ಲಾ ತರಹದ ವೇಷವನ್ನು ಮಾಡಬಲ್ಲ ಸಮರ್ಥ ಕಲಾವಿದರಾಗಿದ್ದರು.

ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗದವರಿಗೆ ಉಂಟಾದ ದು:ಖವನ್ನು ಸಹಿಸುವ ಶಕ್ತಿ, ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Related posts

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!