April 2, 2025
Uncategorized

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

ಬೆಳ್ತಂಗಡಿ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 21 ವರ್ಷ ಸೇವೆ ಸಲ್ಲಿಸಿರುವ ಬೆಳ್ತಂಗಡಿಯ ಗಣೇಶ್ ಬಿ.ಎಲ್. ಇವರು ಮೇ 2ರಂದು ನಿವೃತ್ತಿಯಾಗಿದ್ದು ಇಂದು (ಮೇ4) ಹುಟ್ಟೂರಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವಸ್ಥಾನದಿಂದ ಮೆರವಣಿಗೆ ಮೂಲಕ ಅವರ ಲಾಯಿಲ ಮನೆಗೆ ಆಗಮಿಸಿದರು.

ಈ ವೇಳೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮರಾಟಿ ಸೇವಾ ಸಂಘದ ಉಮೇಶ್ ಕೇಲ್ತಡ್ಕ, ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಲಯದ ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಳಂತಿಲ, ಇವರ ಸೇವೆ ಬಗ್ಗೆ ಮಾತನಾಡಿ ಶುಭ ಕೋರಿದರು.

ನಿವೃತ್ತ ಯೋಧ ಗಣೇಶ್ ಬಿ.ಎಲ್ ಮಾತನಾಡಿ ಸೈನಿಕರಿಗೆ ನೀಡಿರುವ ಇಂತಹ ಗೌರವಕ್ಕೆ ಅಭಾರಿಯಾಗಿದ್ದೇನೆ ಎಂದು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ನವೀನ್ ಬಿ.ಕೆ, ನೋಟರಿ ವಕೀಲ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಬಿ.ಎಲ್, ಪದಾಧಿಕಾರಿಗಳು ಮತ್ತು ವಕೀಲರು, ಮರಾಟಿ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು ಮತ್ತು ಕುಟುಂಬ ವರ್ಗದವರು, ನಾಗರಿಕರು ಉಪಸ್ಥಿತರಿದ್ದು ಶುಭ ಕೋರಿದರು.

ಮರಾಟಿ ಸೇವಾ ಸಂಘದ ಕ್ರೀಡಾ ಕಾರ್ಯದರ್ಶಿ ರವಿ ನಾಯ್ಕ್ ಬಡಕೊಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!