27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

ಧರ್ಮಸ್ಥಳ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ4 ರಂದು ನಡೆದಿದೆ.

ಸುಮಾರು 42 ವರ್ಷದ ವ್ಯಕ್ತಿ ಮಧ್ಯಾಹ್ನ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ, ನೀರಿನ ಬಾಟಲ್ ಹಿಡಿದು ಕುಳಿತ್ತಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ನಿವಾಸಿ ಮಹಾರುದ್ರ ಸ್ವಾಮಿ ಎಂದು ಗುರುತಿಸಲಾಗಿದೆ. ಈತ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದೆ. ಮಧ್ಯಾಹ್ನದ ವೇಳೆ ಅತಿಯಾದ ಬಿಸಿಲಿನ ತಾಪವಿದ್ದು ಇದರಿಂದಾಗಿ ಬಸವಳಿದು ಬಿದ್ದು ಸಾವನ್ನಾಪ್ಪಿರಬಹುದೇ ಎಂಬ ಅನುಮಾನವೂ ಇದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya
error: Content is protected !!