September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಬೆಳ್ತಂಗಡಿ: ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಆಡಳಿತ ಸೌಧಕ್ಕೆ ಮೇ.3ರಂದು ದಿಢೀರ್ ಭೇಟಿ ನೀಡಿ ಸಾರ್ವಜನಿಕರ ಜೊತೆ ಸಮಸ್ಯೆಗಳನ್ನು ಕೇಳಿ ಸ್ಥಳದಲ್ಲಿಯೇ ಬಗೆಹರಿಸುವ 26 ಅಂಶಗಳ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಹಲವು ಸಮಸ್ಯೆಗಳನ್ನು ಪಡೆದರು.

ಬೆಳ್ತಂಗಡಿ ಆಡಳಿತ ಸೌಧ ಭೇಟಿಯಲ್ಲಿ 94 CC, ಆಹಾರ ಇಲಾಖೆಯಲ್ಲಿ ಸಾರ್ವಜನಿಕರಿಗೆ ಪಡಿತರ ವಿತರಣೆ ಸರಿಯಾಗಿ ಆಗುತ್ತಿಲ್ಲ, ವಿಧವ ವೇತನ ಬರುತ್ತಿಲ್ಲ, ಗೃಹ ಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರನ್ನು ಕರೆದು ಸ್ಥಳದಲ್ಲಿಯೇ ಪುಸ್ತಕ ದಾಖಲೆ ಹಾಗೂ ಕಂಪ್ಯೂಟರ್ ದಾಖಲೆಗಳನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. 750 ಬಿಪಿಎಲ್ ಕಾರ್ಡ್ ಸಾರ್ವಜನಿಕರಿಗೆ ಸಿಗಲು ಬಾಕಿ ಇರುವ ಬಗ್ಗೆ ಮಾಹಿತಿ ಪಡೆದ ಲೋಕಾಯುಕ್ತ ಪೊಲೀಸರು ಶೀಘ್ರದಲ್ಲೇ ಪರಿಹರಿಸಲು ಸೂಚನೆ ನೀಡಿದ್ದಾರೆ. ಪುಂಜಾಲಕಟ್ಟೆಯ ಕುಕ್ಕಳ ಗ್ರಾಮದ ಸುನಿತಾ(32) ಎಂಬವರ ಗಂಡ ಅಶೋಕ್ ಸಾವನ್ನಪ್ಪಿದ ಬಳಿಕ ಏಳು ತಿಂಗಳಿನಿಂದ ಪಡಿತರ ಅಕ್ಕಿ ವಿತರಣೆ ಆಗದೆ ಹಲವಾರು ಭಾರಿ ಆಹಾರ ಇಲಾಖೆಯಲ್ಲಿ ಅಲೆದಾಟ ಮಾಡುತ್ತಿದ್ದ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ನೊಂದ ಮಹಿಳೆ ಸುನಿತಾ ಅವರನ್ನು ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳನ್ನು ಕರೆಸಿ ದಾಖಲೆ ಪರಿಶೀಲನೆ ನಡೆಸಿದಾಗ ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷದಿಂದ ಮಹಿಳೆಗೆ ಪಡಿತರ ದೊರಕದೆ ಏಳು ತಿಂಗಳಿನಿಂದ ಬಾಕಿಯಾಗಿರುವುದು ಪತ್ತೆಯಾಗಿದೆ. ತಕ್ಷಣ ಸ್ಥಳದಲ್ಲಿಯೇ ದಾಖಲೆಯನ್ನು ಸರಿಪಡಿಸಿ ಮಹಿಳೆಗೆ ಪಡಿತರ ಸಿಗುವಂತೆ ಲೋಕಾಯುಕ್ತ ಅಧಿಕಾರಿಗಳು ವ್ಯವಸ್ಥೆ ಮಾಡಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿಗಳಾದ ಡಾ.ಗಾನ ಪಿ. ಕುಮಾರ್, ಚೆಲುವರಾಜ್, ಇನ್ಸೆಕ್ಟರ್ ಗಳಾದ ಅಮನುಲ್ಲಾ ಎ, ಸುರೇಶ್.ಕೆ.ಎನ್, ಸುರೇಶ್ ಸಿ.ಎಲ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಉರುವಾಲು ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya
error: Content is protected !!