24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

ವಾಹನಗಳ ಮೇಲೆ ಹೈ ಸೇಫ್ಟಿ ರಿಜಿಸ್ಟ್ರೇಶನ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಮೇ 31 ವರೆಗೆ ಅವಕಾಶ ನೀಡಲಾಗಿದ್ದು ನಂಬರ್ ಪ್ಲೇಟ್ ಅಳವಡಿಸದಿದ್ದಾರೆ ದಂಡ ವಿಧಿಸುವ ಸಾಧ್ಯತೆ ಇದೆ.

2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಹೆಚ್.ಎಸ್ಆರ್ ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್‌ ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ ಎಂದು ಸಾರಿಗೆ ಅಧಿಕಾರಿಗಳು ಅಂದಾಜಿಸಿದ್ದಾರೆ. ಎರಡು ಗಡುವಿನ ವಿಸ್ತರಣೆಗಳ ಹೊರತಾಗಿಯೂ, ರಾಜ್ಯದಲ್ಲಿ ಕೇವಲ 34 ಲಕ್ಷ ಹೆಚ್.ಎಸ್ಆರ್ ಪಿ ಗಳು ಮಾತ್ರ ನೋಂದಾಯಿಸಲ್ಪಟ್ಟಿವೆ. ಹೆಚ್ಚುವರಿ ಸಾರಿಗೆ ಆಯುಕ್ತ (ಜಾರಿ) ಸಿ.ಮಲ್ಲಿಕಾರ್ಜುನ ಮಾತನಾಡಿ, ಫೆಬ್ರವರಿಯಿಂದ ಸುಮಾರು 18 ಲಕ್ಷ ನೋಂದಣಿಗಳು ನಡೆದಿವೆ ಮತ್ತು ಹೆಚ್ಚಿನ ವಾಹನಗಳು ಇನ್ನೂ ಹೆಚ್.ಎಸ್ಆರ್ ಪಿ ಯನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ.

ಕರ್ನಾಟಕದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಾಯಿಸಿದ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರು, ಮಧ್ಯಮ, ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್ & ಟ್ರ್ಯಾಕ್ಟರ್‌ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸುವುದು ಕಡ್ಡಾಯ. ರಾಜ್ಯ ಸರ್ಕಾರವು ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಮೇ.31ರವರೆಗೆ ಅವಕಾಶ ನೀಡಿದೆ. ರಾಜ್ಯ ಸಾರಿಗೆ ಇಲಾಖೆ ಮೇ. 31ರವರೆಗೆ ಎಚ್ ಎಸ್ ಆರ್ ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಸ ನೀಡಿದೆ.

ನಂತರ ಜೂ. 1 ರಿಂದ ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

Suddi Udaya

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya
error: Content is protected !!