29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

ಧರ್ಮಸ್ಥಳ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ4 ರಂದು ನಡೆದಿದೆ.

ಸುಮಾರು 42 ವರ್ಷದ ವ್ಯಕ್ತಿ ಮಧ್ಯಾಹ್ನ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ, ನೀರಿನ ಬಾಟಲ್ ಹಿಡಿದು ಕುಳಿತ್ತಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ನಿವಾಸಿ ಮಹಾರುದ್ರ ಸ್ವಾಮಿ ಎಂದು ಗುರುತಿಸಲಾಗಿದೆ. ಈತ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದೆ. ಮಧ್ಯಾಹ್ನದ ವೇಳೆ ಅತಿಯಾದ ಬಿಸಿಲಿನ ತಾಪವಿದ್ದು ಇದರಿಂದಾಗಿ ಬಸವಳಿದು ಬಿದ್ದು ಸಾವನ್ನಾಪ್ಪಿರಬಹುದೇ ಎಂಬ ಅನುಮಾನವೂ ಇದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!