24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

ಬೆಳ್ತಂಗಡಿ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 21 ವರ್ಷ ಸೇವೆ ಸಲ್ಲಿಸಿರುವ ಬೆಳ್ತಂಗಡಿಯ ಗಣೇಶ್ ಬಿ.ಎಲ್. ಇವರು ಮೇ 2ರಂದು ನಿವೃತ್ತಿಯಾಗಿದ್ದು ಇಂದು (ಮೇ4) ಹುಟ್ಟೂರಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವಸ್ಥಾನದಿಂದ ಮೆರವಣಿಗೆ ಮೂಲಕ ಅವರ ಲಾಯಿಲ ಮನೆಗೆ ಆಗಮಿಸಿದರು.

ಈ ವೇಳೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮರಾಟಿ ಸೇವಾ ಸಂಘದ ಉಮೇಶ್ ಕೇಲ್ತಡ್ಕ, ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಲಯದ ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಳಂತಿಲ, ಇವರ ಸೇವೆ ಬಗ್ಗೆ ಮಾತನಾಡಿ ಶುಭ ಕೋರಿದರು.

ನಿವೃತ್ತ ಯೋಧ ಗಣೇಶ್ ಬಿ.ಎಲ್ ಮಾತನಾಡಿ ಸೈನಿಕರಿಗೆ ನೀಡಿರುವ ಇಂತಹ ಗೌರವಕ್ಕೆ ಅಭಾರಿಯಾಗಿದ್ದೇನೆ ಎಂದು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ನವೀನ್ ಬಿ.ಕೆ, ನೋಟರಿ ವಕೀಲ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಬಿ.ಎಲ್, ಪದಾಧಿಕಾರಿಗಳು ಮತ್ತು ವಕೀಲರು, ಮರಾಟಿ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು ಮತ್ತು ಕುಟುಂಬ ವರ್ಗದವರು, ನಾಗರಿಕರು ಉಪಸ್ಥಿತರಿದ್ದು ಶುಭ ಕೋರಿದರು.

ಮರಾಟಿ ಸೇವಾ ಸಂಘದ ಕ್ರೀಡಾ ಕಾರ್ಯದರ್ಶಿ ರವಿ ನಾಯ್ಕ್ ಬಡಕೊಡಿ ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!