April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಬೆಳ್ತಂಗಡಿ: ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಆಡಳಿತ ಸೌಧಕ್ಕೆ ಮೇ.3ರಂದು ದಿಢೀರ್ ಭೇಟಿ ನೀಡಿ ಸಾರ್ವಜನಿಕರ ಜೊತೆ ಸಮಸ್ಯೆಗಳನ್ನು ಕೇಳಿ ಸ್ಥಳದಲ್ಲಿಯೇ ಬಗೆಹರಿಸುವ 26 ಅಂಶಗಳ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಹಲವು ಸಮಸ್ಯೆಗಳನ್ನು ಪಡೆದರು.

ಬೆಳ್ತಂಗಡಿ ಆಡಳಿತ ಸೌಧ ಭೇಟಿಯಲ್ಲಿ 94 CC, ಆಹಾರ ಇಲಾಖೆಯಲ್ಲಿ ಸಾರ್ವಜನಿಕರಿಗೆ ಪಡಿತರ ವಿತರಣೆ ಸರಿಯಾಗಿ ಆಗುತ್ತಿಲ್ಲ, ವಿಧವ ವೇತನ ಬರುತ್ತಿಲ್ಲ, ಗೃಹ ಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರನ್ನು ಕರೆದು ಸ್ಥಳದಲ್ಲಿಯೇ ಪುಸ್ತಕ ದಾಖಲೆ ಹಾಗೂ ಕಂಪ್ಯೂಟರ್ ದಾಖಲೆಗಳನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. 750 ಬಿಪಿಎಲ್ ಕಾರ್ಡ್ ಸಾರ್ವಜನಿಕರಿಗೆ ಸಿಗಲು ಬಾಕಿ ಇರುವ ಬಗ್ಗೆ ಮಾಹಿತಿ ಪಡೆದ ಲೋಕಾಯುಕ್ತ ಪೊಲೀಸರು ಶೀಘ್ರದಲ್ಲೇ ಪರಿಹರಿಸಲು ಸೂಚನೆ ನೀಡಿದ್ದಾರೆ. ಪುಂಜಾಲಕಟ್ಟೆಯ ಕುಕ್ಕಳ ಗ್ರಾಮದ ಸುನಿತಾ(32) ಎಂಬವರ ಗಂಡ ಅಶೋಕ್ ಸಾವನ್ನಪ್ಪಿದ ಬಳಿಕ ಏಳು ತಿಂಗಳಿನಿಂದ ಪಡಿತರ ಅಕ್ಕಿ ವಿತರಣೆ ಆಗದೆ ಹಲವಾರು ಭಾರಿ ಆಹಾರ ಇಲಾಖೆಯಲ್ಲಿ ಅಲೆದಾಟ ಮಾಡುತ್ತಿದ್ದ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ನೊಂದ ಮಹಿಳೆ ಸುನಿತಾ ಅವರನ್ನು ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳನ್ನು ಕರೆಸಿ ದಾಖಲೆ ಪರಿಶೀಲನೆ ನಡೆಸಿದಾಗ ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷದಿಂದ ಮಹಿಳೆಗೆ ಪಡಿತರ ದೊರಕದೆ ಏಳು ತಿಂಗಳಿನಿಂದ ಬಾಕಿಯಾಗಿರುವುದು ಪತ್ತೆಯಾಗಿದೆ. ತಕ್ಷಣ ಸ್ಥಳದಲ್ಲಿಯೇ ದಾಖಲೆಯನ್ನು ಸರಿಪಡಿಸಿ ಮಹಿಳೆಗೆ ಪಡಿತರ ಸಿಗುವಂತೆ ಲೋಕಾಯುಕ್ತ ಅಧಿಕಾರಿಗಳು ವ್ಯವಸ್ಥೆ ಮಾಡಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿಗಳಾದ ಡಾ.ಗಾನ ಪಿ. ಕುಮಾರ್, ಚೆಲುವರಾಜ್, ಇನ್ಸೆಕ್ಟರ್ ಗಳಾದ ಅಮನುಲ್ಲಾ ಎ, ಸುರೇಶ್.ಕೆ.ಎನ್, ಸುರೇಶ್ ಸಿ.ಎಲ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya
error: Content is protected !!