24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

ಉಜಿರೆ: : ನಮ್ಮ ತಾಯಿ, ಮಾತೃಭೂಮಿ ಸ್ವರ್ಗಕ್ಕಿಂತ ಮಿಗಿಲಾದುದು. ತಾಯಿ ಭಾಷೆ ಹೃದಯದ ಭಾಷೆ . ರಾಜ್ಯದಲ್ಲಿ  ಮಾತೃ ಭಾಷೆಗೆ  ಪ್ರಾಧಾನ್ಯತೆ ಇದ್ದರೂ ರಾಜಧಾನಿಯಲ್ಲೇ  ಕನ್ನಡದ  ಉಳಿವಿಗೆ  ಸವಾಲು ಎದುರಾಗಿದೆ. ಕಾರಣ  ಅನ್ಯಭಾಷಿಗರ  ಆಕ್ರಮಣ! ಕನ್ನಡ ಭಾಷೆಯನ್ನು ಮುಂದಿನ ಅನೇಕ ವರ್ಷಗಳವರೆಗೆ ಜೀವಂತವಾಗಿರಿಸಲು ಕನ್ನಡ ನಾಡು, ನುಡಿ, ಸಂಸ್ಕೃತಿ ಭಾಷೆಯ ಸಂವರ್ಧನೆಗೆ  ಭಾಷೆಯ ಆಸ್ಮಿತೆಯಾದ ಕನ್ನಡ ಸಾಹಿತ್ಯ ಪರಿಷತ್ತನ್ನು ಬಲಗೊಳಿಸೋಣ ಎಂದು ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ  ಪ್ರಾಂಶುಪಾಲ  ಡಾ| ಬಿ.ಎ.ಕುಮಾರ ಹೆಗ್ಡೆ  ನುಡಿದರು.

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ  ಆಶ್ರಯದಲ್ಲಿ ಮೇ 5 ರಂದು ಉಜಿರೆ ಶ್ರೀ ಸಿದ್ಧವನ ಗುರುಕುಲದಲ್ಲಿ ಆಯೋಜಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ 11೦ನೇ  ಸಂಸ್ಥಾಪನಾ  ದಿನಾಚರಣೆ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೊಬೈಲ್, ಫಾಸ್ಟ್‌ಫುಡ್ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ  ಓದುವ, ಬರೆಯುವ ಹವ್ಯಾಸ ಮರೆಯಾಗುತ್ತಿದೆ. ಅದಕ್ಕಾಗಿ ಪ್ರತಿ ಹೋಬಳಿ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ  ಕನ್ನಡ ಭಾಷೆಯಲ್ಲಿ ಸಂವಾದ, ಕವಿ, ಕವನಗಳನ್ನು  ಬೆಂಬಲಿಸುವ, ಕನ್ನಡ ಭಾ ಷೆಯಲ್ಲಿ ಬರೆಯುವ ಕಾರ್‍ಯಕ್ರಮ ಹಮ್ಮಿಕೊಳ್ಳ ಬೇಕಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಶ್ರೇಷ್ಠವಾದದ್ದು ತನ್ನತ್ತ ಆವರಿಸುವ ಸಲುವಾಗಿ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ ಎಂದು ಕರೆ ನೀಡಿದರು.

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಎಂ.ಪಿ. ಶ್ರೀನಾಥ್  ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಭಾಷೆಯ ಸಮೃದ್ಧಿಗೆ  ಜಿಲ್ಲೆಯಲ್ಲಿ  ಕಳೆದ ಎರಡೂವರೆ ವರ್ಷದಲ್ಲಿ  4೦೦ಕ್ಕಿಂತ ಅಧಿ ಕ ಕಾರ್‍ಯಕ್ರಮಗಳನ್ನು  ನಡೆಸಿ ಸಾಹಿತ್ಯವನ್ನು  ಮನೆ ಮನೆಗೆ  ತಲುಪಿಸುವ ಕಾರ್ಯ ಕೈಗೊಳ್ಳಲಾಗಿದೆ. ಜಿಲ್ಲೆಯ 9 ತಾಲೂಕುಗಳಲ್ಲಿ ಇಂದು ಸಂಸ್ಥಾಪಕ ದಿನಾಚರಣೆ ಆಯೋಜಿಸಲಾಗಿದೆ, ತಾಲೂಕು, ಹೋಬಳಿ ಮಟ್ಟದಲ್ಲಿ ಘಟಕ ಸ್ಥಾಪಿಸಿ ಗ್ರಾಮ ಸಂಚಾಲಕರ ಮೂಲಕ  ಕನ್ನಡ ಭಾಷೆಯ  ಚಟುವಟಿಕೆಗಳನ್ನು ನಡೆಸಲಾಗುವುದು  ಎಂದರು.   ಸಂಪನ್ಮೂಲ ವ್ಯಕ್ತಿ ಪುತ್ತೂರು ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗ ಮುಖ್ಯಸ್ಥ ಡಾ| ಶ್ರೀಶ ಕುಮಾರ ಎಂ.ಕೆ. ಉಪನ್ಯಾಸ ನೀಡಿ, ಒಂದು ಭಾಷೆ, ಸಾಹಿತ್ಯ ಮೇಲ್ನೋಟಕ್ಕೆ ಅದಾಗಿ  ತೆರೆದುಕೊಳ್ಳುವುದಿಲ್ಲ. ಸಾಹಿತ್ಯ  ಶಬ್ಧ ಮತ್ತು ಅರ್ಥಗಳ ಮಂಜುಳ ಸಂಯೋಜನೆ ಸಮಾಜಕ್ಕೆ ಹಿತವಾದ ಸಾಹಿತ್ಯ ನೀಡುವ ಸಾಹಿತ್ಯ ಕೃಷಿ ಬೆಳೆಯಬೇಕಿದೆ. ಆದರೆ ಇಂದು ವಿಕೃತಿಯೆಡೆಗೆ ಕೊಂಡೊಯ್ಯುವ ಸಾಹಿತ್ಯದಿಂದ ಅಪಾಯವಿದೆ. ನಮ್ಮನ್ನು ಜೀವನ ಪರ್ಯಂತ ಉಳಿಸಿಕೊಳ್ಳಬಹುದಾದ ಹವ್ಯಾಸ ಇದ್ದರೆ ಅದು ಓದುವ ಹವ್ಯಾಸ ಎಂದ ಅವರು ಎಲ್ಲ ಭಾಷೆಗಳನ್ನು  ಗೌರವಿಸಿ, ಕನ್ನಡ ಭಾಷೆಯನ್ನು ಪ್ರೀತಿಸಿ.  ನಮ್ಮ ಕನ್ನಡ ಭಾಷಾ ಸಂಸ್ಕೃತಿಯಿಂದ ಸಾಹಿತ್ಯವನ್ನು ಗಟ್ಟಿಗೊಳಿಸುವ ಕೆಲಸವಾಗಲಿ. ಸಾಹಿತ್ಯ ಯಾವತ್ತೂ ವಿಕೃತಿಯ ಕಡೆಗೆ ಕೊಂಡುಹೋಗಬಾರದು. ಪ್ರಕೃತಿ ಸಂಸ್ಕೃತಿಯಾಗಿ ಪರಿವರ್ತನೆಯಾಗುವ ಸಾಹಿತ್ಯ  ಸೃಷ್ಟಿಯಾಗಬೇಕು. ಸಂಸ್ಕೃತಿಯಿಂದ ಸಾಹಿತ್ಯವನ್ನು ಗಟ್ಟಿಗೊಳಿಸುವ ಪ್ರಯತ್ನ ನಡೆಸಬೇಕು ಎಂದರು. 

ಕ.ಸಾ.ಪ  ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಡಾ| ಮಾಧವ ಎಂ.ಕೆ. ಮಾತನಾಡಿ, ಭಾರತ ದೇಶ ಇತರ ದೇಶದ ಮೇಲೆ ದಾಳಿ ಮಾಡಿರುವ ಇತಿಹಾಸವಿಲ್ಲ, ಆದರೆ ಭಾರತದ ಮೇಲೆ ಆಗಿರುವ ದಾಳಿಗಳು ಭಾಷೆಯ ಮೇಲೂ ಪರಿಣಾಮ ಬೀರಿದೆ. ಅದಕ್ಕೆ ಬ್ರಿಟೀಷರಿಂದ ಭಾ ರತದಲ್ಲಿ ಆಂಗ್ಲ ಶಿಕ್ಷಣ ಪದ್ಧತಿ ಪರಿಣಾಮ ಬೀರಿರುವುದೇ ಸಾಕ್ಷಿ. ಇಂದು ಶಿಕ್ಷಣ ಪದ್ಧತಿ ವ್ಯಾಪರೀಕರಣವಾಗಿದೆ. ನಮ್ಮ ಡೀಮ್ಡ್ ವಿ. ವಿ. ಗಳು ನಮ್ಮ ದೇಶೀಯ ಭಾ ಷೆಯನ್ನು ಅಳಿಸಿ ಪಾಶ್ಚಾತ್ತೀಕರಣವಾಗಿಸುತ್ತ ವಾಲುತ್ತಿದೆ. . ಹೀಗಾಗಿ ಕನ್ನಡ ಭಾಷೆಯ  ಕೀಳರಿಮೆಯಿಂದ ಹೊರಬರದೇ ಹೋದಲ್ಲಿ ಕನ್ನಡದ ಉಳಿವು ಸವಾಲಾಗಲಿದೆ . ಈ ನಿಟ್ಟಿನಲ್ಲಿ  ಗಮನ ಸೆಳೆಯುವ ಅಥವಾ ಹೋರಾಟ ನಡೆಸುವ ಪ್ರಯತ್ನವಾಗಬೇಕಾಗಿದೆ . ಭಾರತೀಯ  ಭಾಷೆಗಳ  ಮೇಲೆ   ನಡೆ ಯುತ್ತಿರುವ ಪ್ರಹಾರವನ್ನು  ತಡೆಗಟ್ಟಬೇಕಾಗಿದೆ ಎಂದು ವಿಶ್ಲೇಷಿಸಿದರು.

ನಿವೃತ್ತ  ಪ್ರಾಚಾರ್ಯ ಕೃಷ್ಣಪ್ಪ ಪೂಜಾರಿ  ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ  ಪರಿಷತ್ತು ಗೌರವ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು ಸ್ವಾಗತಿಸಿ,  ಕಾರ್‍ಯಕ್ರಮ ನಿರ್ವಹಿಸಿ,ವಂದಿಸಿದರು. 

Related posts

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!