23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

ಬೆಳ್ತಂಗಡಿ: 800 ವರ್ಷಗಳ ಇತಿಹಾಸ ಹೊಂದಿರುವ, ನಾಡಿನ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್ ನಲ್ಲಿ ವರ್ಷಂಪ್ರತಿ ನಡೆಯುತ್ತಿರುವ ಉರೂಸ್ ಸಂಭ್ರಮದಲ್ಲಿ ಪ್ರತಿದಿನ ರಾತ್ರಿ ನಡೆಯುವ ಆಧ್ಯಾತ್ಮಿಕ ಕಾರ್ಯಕ್ರಮಗಳು ವಿಶೇಷ ಕಳೆ ನೀಡಿದೆ.


ಸಯ್ಯಿದ್ ಕುಂಬೋಳ್ ತಂಙಳ್, ಸಯ್ಯಿದ್ ಕೂರತ್ ತಂಙಳ್ ಮತ್ತು ಸಯ್ಯಿದ್ ಕಾಜೂರು ತಂಙಳ್ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಲ್ಲಿ ಮೇ.3ರಂದು ಕಿಲ್ಲೂರು ಖತೀಬ್ ಶಂಶೀರ್ ಸಖಾಫಿ ಧಾರ್ಮಿಕ ಪ್ರವಚನ ನೀಡಿದರು. ಮೇ 4 ರಂದು ಮುಹಮ್ಮದ್ ರಫೀಕ್ ಸಅದಿ ದೇಲಂಪಾಡಿ ಧಾರ್ಮಿಕ ಉಪನ್ಯಾಸ ನಡೆಸಿಕೊಟ್ಟರು.
ಮೇ.5 ರಂದು ಅಂತಾರಾಷ್ಟ್ರೀಯ ಖ್ಯಾತಿಯ ಹಾಡುಗಾರರಾದ ಸಯ್ಯಿದ್ ತ್ವಾಹಾ ತಂಙಳ್ ಪೂಕೊಟೂರು ಮತ್ತು ಶಹಿನ್ ಬಾಬು ಅವರ ಸಂಗಡಿಗರ ಭಾಗವಹಿಸುವಿಕೆಯಲ್ಲಿ ಪ್ರವಾದಿ ನಾಮಸಂಕೀರ್ತನೆಯ ಬುರ್ದಾ ಮಜ್ಲಿಸ್ ಹಾಗೂ ಪ್ರವಾದಿ ಮದಹ್ ಗೀತೆಗಳ ಇಶಲ್ ನೈಟ್ ನಡೆಯಿತು.


ಮೇ.6 ರಂದು, ಆನ್ಲೈನ್ ವೇದಿಕೆ ಮೂಲಕ ಧರ್ಮ ಸಂದೇಶದ ಹೊಸ ಇತಿಹಾಸ ಬರೆದಿರುವ ಅಬ್ದುಲ್ಲತೀಫ್ ಸಖಾಫಿ ಕಾಂದಪುರಂ ನೇತೃತ್ವದಲ್ಲಿ ಮದನಿಯಂ ಮಜ್ಲಿಸ್ ನಡೆಯಿತು. ಮೇ.೭ ರಂದು ಅಶ್ಪಾಕ್ ಫೈಝಿ ನಂದಾವರ ಅವರು ಧಾರ್ಮಿಕ ಪ್ರವಚನ ನೀಡಿದರು.
ಈ ಎಲ್ಲಾ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಕಾಜೂರು ವಹಿಸಿದ್ದರು.


ಉರೂಸ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು, ಪ್ರಧಾನ ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಜೊತೆ ಕಾರ್ಯದರ್ಶಿ ಶಾಹುಲ್ ಹಮೀದ್ ಕಿಲ್ಲೂರು, ಕೋಶಾಧಿಕಾರಿ ಕೆ.ಎಮ್ ಕಮಾಲ್ ಕಾಜೂರು ಉಪಸ್ಥಿತರಿದ್ದು ಅತಿಥಿಗಳನ್ನು ಕಾಜೂರು ಪರವಾಗಿ ಅಭಿನಂದಿಸಿ ಗೌರವಿಸಿದರು. ಸಯ್ಯಿದ್ ಕಾಜೂರು ತಂಙಳ್, ಸಯ್ಯಿದ್ ಸಿದ್ದೀಕ್ ತಂಙಳ್ ತೀರ್ಥಹಳ್ಳಿ, ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ದಾರುಸ್ಸಲಾಂ, ಕಾಜೂರು ಮುದರ್ರಿಸ್ ಮುಹಮ್ಮದ್ ತೌಸೀಫ್ ಸಅದಿ ಹರೇಕಳ, ಬೆಳ್ತಂಗಡಿ ಭಾಗಿಯಾಗಿದ್ದರು. ಬೆಳ್ತಂಗಡಿ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ ಸುಬ್ಬಾಪುರಮಠ, ವಕ್ಫ್ ಜಿಲ್ಲಾಧಿಕಾರಿ ಅಬೂಬಕ್ಕರ್ ಸಾಲೆತ್ತೂರು ಅವರನ್ನು ಸನ್ಮಾನಿಸಲಾಯಿತು.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಶಿಶಿಲ : ಕಂಚಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!