27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

ಬೆಳ್ತಂಗಡಿ:ಹಿರಿಯ ಹಾಗೂ ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ ವಸಂತ ಬಂಗೇರರ ನಿಧನಕ್ಕೆ ವಿಪಕ್ಷ ನಾಯಕ, ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಮಾರು ಐದು ಅವದಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ತಾಲೂಕಿನ ಅಭಿವೃದ್ಧಿಯಲ್ಲಿ ಗಮನಾರ್ಹ ಸಾಧನೆ ಮಾಡಿದವರು ಬಂಗೇರರು.ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಡಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ ವಸಂತ ಬಂಗೇರರಾಗಿದ್ದಾರೆ.

ಅವರ ನಿಧನ ವೈಯಕ್ತಿಕವಾಗಿಯೂ ತಾಲೂಕಿನ ಜನತೆಗೂ ಅಪಾರ ದುಃಖವನ್ನು ತಂದಿದ್ದು, ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಎಂದು ಸಂತಾಪ ಸಲ್ಲಿಸಿದ್ದಾರೆ.

Related posts

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!