April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಇಂದು ಸಂಜೆ ಚಿರನಿದ್ರೆಗೆ ಜಾರಿದ್ದು, ಅವರ ಪ್ರಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನ ನಾಳೆ ಮೇ 9ರಂದು ಬೆಳಿಗ್ಗೆ ಹಳೆಕೋಟೆಯ ಅವರ ಮನೆಯಲ್ಲಿ ನಡೆಯಲಿದೆ.

ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ ಐದು ಅವಧಿಗೆ ಸೇವೆ ಸಲ್ಲಿಸಿ, ತಾಲೂಕಿನ ಅಭಿವೃದ್ಧಿಗೆ ವಿಶೇಷ ಕೊಡುಗೆಯನ್ನು ಬಂಗೇರರು ನೀಡಿದ್ದರು, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳಿಂದ ಸ್ಪರ್ಧಿಸಿ ಚುನಾಯಿತರಾದ ಏಕೈಕ ಶಾಸಕ ಬಂಗೇರರು, ರಾಜಕೀಯ, ಧಾರ್ಮಿಕ, ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಬಂಗೇರರು, ಶ್ರೀ ಗುರುದೇವ ಪದವಿ ಪೂರ್ವ ಹಾಗೂ ಪದಪಿ ಕಾಲೇಜನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು. ಆನೇಕ ಮಂದಿ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡಿದ ಕೀರ್ತಿ ಬಂಗೇರರಿಗೆ ಸಲ್ಲುತ್ತದೆ. ಕಳೆದ ನಾಲ್ಕೈದು ತಿಂಗಳ ಹಿಂದೆ ಅಸೌಖ್ಯಕ್ಕೆ ಒಳಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಗೇರರು ಇಂದು ಸಂಜೆ ಆಸ್ಪತ್ರೆಯಲ್ಲಿ ನಿಧನರಾದರೆಂದು ವರದಿಯಾಗಿದೆ. ಬಂಗೇರರ ಪಾರ್ಥಿವ ಶರೀರವನ್ನು ಇಂದು ರಾತ್ರಿ 3 ಗಂಟೆಗೆ ಬೆಳ್ತಂಗಡಿಯ ಹಳೆಕೋಟೆಯ ಮನೆಗೆ ತರುವ ಸಾಧ್ಯತೆಗಳಿದ್ದು, ನಾಳೆ ಬೆಳಿಗ್ಗೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

Related posts

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!