24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸ್ವರ್ಗಸ್ಥರಾದ ವಿಚಾರ ತಿಳಿದು ವಿಷಾದವಾಯಿತು. ಅವರು ನಮ್ಮ ತಾಲ್ಲೂಕಿನ ಶಾಸಕರಾಗಿ ಜನಸ್ನೇಹಿಯಾಗಿದ್ದರು
ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

ಬಂಗೇರ ಅವರು ಸಾಮಾನ್ಯ ಜನರೊಳಗೆ ಹಾಗೂ ಕುಟುಂಬದಲ್ಲಿ ವಿಚಾರ-ಬೇಧಗಳು ಬಂದಾಗ ನಮ್ಮ ತುಳುನಾಡಿನಲ್ಲಿ ಹೇಳುವಂತೆ ಪಂಚಾತಿಕೆ ಅಂದರೆ ಒಗ್ಗೂಡಿಸುವಿಕೆಗೆ ಪ್ರಯತ್ನ ಮಾಡುತ್ತಿದ್ದರು. ಅವರ ಈ ಹವ್ಯಾಸದಿಂದ ಅವರಿಗೆ ಎಷ್ಟೇ ಕಷ್ಟವಾದರೂ ಸಮಾಜದ ಅನೇಕ ಕುಟುಂಬಗಳನ್ನು ಒಗ್ಗೂಡಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಅವರ ಈ ಸಾಧನೆಯಿಂದಾಗಿ ಸಮಾಜದಲ್ಲಿರುವ ಬಿರುಕು ಬಿಟ್ಟ ಅನೇಕ ಕುಟುಂಬಗಳು ಒಟ್ಟಾಗುತ್ತಿದ್ದವು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹೆಗ್ಗಡೆಯವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಬೆಳ್ತಂಗಡಿ ಮಂಜುಶ್ರೀ ಜೆಸಿಐ ವತಿಯಿಂದ ಜೂನಿಯರ್ ಜೇಸಿ ಪದಗ್ರಹಣ ಹಾಗೂ ಯೂತ್ ಡೇ ಕಾರ್ಯಕ್ರಮ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya
error: Content is protected !!