April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ. ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು. 1985 ರಲ್ಲಿ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಇಬ್ಬರು ಶಾಸಕರು ಮಾತ್ರ ಇದ್ದರು. ಒಬ್ಬರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಸಂತ ಬಂಗೇರ. ಕರ್ನಾಟಕದ ರಾಜಕಾರಣದಲ್ಲಿ ಬಂಗೇರ ಅವರು ಸದಾ ನೆನಪಿನಲ್ಲಿ ಉಳಿಯುವ ವ್ಯಕ್ತಿಯಾಗಿದ್ದಾರೆ. ಅವರ ಆತ್ಮಕ್ಕೆ ಭಗವಂತನು ಮೋಕ್ಷ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Related posts

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya
error: Content is protected !!