September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ. ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು. 1985 ರಲ್ಲಿ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಇಬ್ಬರು ಶಾಸಕರು ಮಾತ್ರ ಇದ್ದರು. ಒಬ್ಬರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಸಂತ ಬಂಗೇರ. ಕರ್ನಾಟಕದ ರಾಜಕಾರಣದಲ್ಲಿ ಬಂಗೇರ ಅವರು ಸದಾ ನೆನಪಿನಲ್ಲಿ ಉಳಿಯುವ ವ್ಯಕ್ತಿಯಾಗಿದ್ದಾರೆ. ಅವರ ಆತ್ಮಕ್ಕೆ ಭಗವಂತನು ಮೋಕ್ಷ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Related posts

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಕಾಯ್ದಿರಿಸಿದ ತೀರ್ಪು-ಏ.29ರವರೆಗೆ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

Suddi Udaya

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya
error: Content is protected !!